ಸಿದ್ದಾಪುರ, ಮೇ 29: ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ 6ನೇ ತರಗತಿಯಿಂದ ಖಡ್ಡಾಯವಾಗಿ ಆಂಗ್ಲ ಮಾಧ್ಯಮ ತರಗತಿಗಳು ಪ್ರಾರಂಭ ಮಾಡಬೇಕೆಂಬ ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲಿ,್ಲ ನೆಲ್ಲಿಹುದಿಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ. 30 ರಂದು (ಇಂದು) 6ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಗಳಿಗೆ ದಾಖಲಾತಿ ಪ್ರಾರಂಭವಾಗಲಿದೆ. ಪ್ರಪ್ರಥಮವಾಗಿ ಸರ್ಕಾರಿ ಶಾಲೆಯಲ್ಲಿ ನಡೆಯಲಿರುವ ಆಂಗ್ಲ ಮಾಧ್ಯಮ ತರಗತಿಗಳ ದಾಖಲಾತಿಗೆ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ತಾ.ಪಂ. ಸದಸ್ಯೆ ಸುಹದಾ ಅಶ್ರಫ್, ಗ್ರಾ.ಪಂ. ಅಧ್ಯಕ್ಷೆ ಪದ್ಮಾವತಿ ಚಾಲನೆ ನೀಡಲಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ತಾರಾಮಣಿ ತಿಳಿಸಿದ್ದಾರೆ.