ಮಡಿಕೇರಿ, ಮೇ 29: ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ 11ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಗರದ ಸುವರ್ಣ ಕರ್ನಾಟಕ ರಾಜ್ಯ ನೌಕರರ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 70ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದೇ ಸಂದರ್ಭ ಹೊದ್ದೂರು ಮಡಿಕೆ ಸಹಕಾರ ಸಂಘವನ್ನು ಸ್ಥಾಪಿಸಲು ಕಾರಣರಾದ ಕೆ.ಎಸ್. ಪೂವಯ್ಯ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಸಂಘದ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿ ಅನುಮೋದನೆ ಪಡೆಯಲಾಯಿತು. ಈ ಸಂದರ್ಭ ಸಂಘದ ಲಾಂಛನ ಬಿಡುಗಡೆ ಮಾಡಲಾಯಿತು. ಸಮಾರಂಭದ ಉದ್ಘಾಟನೆಯನ್ನು ವ್ಯಾಂಡಮ್ ಎಂಟರ್‍ಪ್ರೈಸಸ್ ಮಾಲೀಕ ಕೆ.ಕೆ. ದಾಮೋದರ್ ಮಾಡಿದರೆ, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಂ.ಡಿ. ನಾಣಯ್ಯ ವಹಿಸಿದ್ದರು. ಸಂಘದ ಸಂಘಟನಾ ಕಾರ್ಯದರ್ಶಿ ವಿ.ಜಿ. ಲೋಕೇಶ್ ಕಾರ್ಯಕ್ರಮ ನಿರೂಪಿಸಿದರೆ, ಖಜಾಂಚಿ ಓ.ಆರ್. ಮಾಯಲಪ್ಪ ಸ್ವಾಗತಿಸಿ, ಸಲಹೆಗಾರ ಚಂದ್ರಶೇಖರ್ ವಂದಿಸಿದರು.