ಮಡಿಕೇರಿ, ಮೇ 28: ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರೀಷಿಯನ್ ಮೆಕಾನಿಕ್ (2 ವರ್ಷ) ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ವೃತ್ತಿಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ವಯೋಮಿತಿ ಕನಿಷ್ಟ 14 ವರ್ಷಗಳು. ಪ್ರವೇಶಕ್ಕಾಗಿ ಜೂನ್ 12 ರವರೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ 08274-249638, 9880252218 ಮತ್ತು ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್: ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ಅಥವಾ ತಿತಿತಿ.ಜeಣಞಚಿಡಿಟಿಚಿಣಚಿಞಚಿ.oಡಿg.iಟಿ ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ
ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು, ಇವರ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಒಟ್ಟು 401 ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ವಿವರಗಳು: ಯಾವದೇ ವಿಶ್ವವಿದ್ಯಾಲಯದಲ್ಲಿ ಸ್ನಾತಕ ಅಥವಾ ಸ್ನಾತಕೋತ್ತರ ಪದವಿ. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ 12.6.2017ಕ್ಕೆ ಅನ್ವಯವಾಗುವಂತೆ ಕನಿಷ್ಟ 21 ರಿಂದ 35 ವರ್ಷಗಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಅಂಗವಿಕಲರು, ವಿಧವೆಯರು ಹಾಗೂ ಮಾಜಿ ಸೈನಿಕರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜೂನ್ 12 ರಾತ್ರಿ 11.45 ಗಂಟೆ ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 300 ಪ್ರವರ್ಗ-2ಎ, 2ಬಿ, 3ಎ, 3ಬಿ.ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 150. ಅರ್ಜಿ ಶುಲ್ಕವನ್ನು ಪಾವತಿಸಲು ಜೂನ್ 13 ಕೊನೆಯ ದಿನವಾಗಿದೆ. ರಾಜ್ಯದ ಯಾವದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ ಪಾವತಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2545956, 080-30574957/30574901 / 30575153 ಅಥವಾ ವೆಬ್‍ಸೈಟ್ hಣಣಠಿ://ಞಠಿsಛಿ.ಞಚಿಡಿ.ಟಿiಛಿ.iಟಿ ನಲ್ಲಿ ಲಭ್ಯವಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಸರ್ಕಾರಿ ಕೋಟಾದ ಸೀಟುಗಳನ್ನು ತುಂಬಲು
ಡಿ.ಎಲ್.ಇಡಿ/ಡಿ.ಪಿ.ಇಡಿ ಸರ್ಕಾರಿ ಕೋಟಾದ ಸೀಟುಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ 18.6.2017 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಮೀಸಲಾತಿ ವಿವರಗಳು ಹಾಗೂ ಇತರೆ ಸೂಚನೆಗಳನ್ನು ವೈಬ್‍ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ. ವೈಬ್‍ಸೈಟ್‍ನಲ್ಲಿನ ಮಾಹಿತಿಗಳನ್ನು ಕಡ್ಡಾಯವಾಗಿ ಓದಿಕೊಂಡು ಅರ್ಜಿಗಳನ್ನು ಕ್ರಮವಾಗಿ ಭರ್ತಿ ಮಾಡುವದು. ಅರ್ಜಿಗಳನ್ನು ತುಂಬುವಾಗ ಅಪೂರ್ಣ ಅಥವಾ ತಪ್ಪು ಮಾಹಿತಿ ನೀಡಿದರೆ ಉಂಟಾಗುವ ಸಮಸ್ಯೆಗಳಿಗೆ ಅಭ್ಯರ್ಥಿಗಳೇ ಜವಾಬ್ದಾರರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಡಯಟ್ ಕೂಡಿಗೆಯನ್ನು ದೂರವಾಣಿ 08276-278287 ರಲ್ಲಿ ಸಂಪರ್ಕಿಸಲು ಕೋರಿದೆ.
ಸ್ವರಚಿತ ಕವನಗಳಿಗೆ
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜೂನ್ 16 ರಂದು ಮಡಿಕೇರಿಯಲ್ಲಿ ನಡೆಯಲಿರುವ 8ನೇ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ತೀರ್ಮಾನಿಸಲಾಗಿದೆ.
ಆಸಕ್ತ ಮಡಿಕೇರಿ ತಾಲೂಕಿನ ಬರಹಗಾರರು ಸ್ವರಚಿತ, ಪ್ರಕಟಣೆಗೆ ಯೋಗ್ಯವಾದ, ಕನ್ನಡ ನಾಡು, ನುಡಿ, ಸಂಸ್ಕøತಿಗೆ ಸಂಬಂಧಿಸಿದಂತಹ ಲೇಖನಗಳನ್ನು ಮತ್ತು ಕಥೆ, ಕವನ, ಚುಟುಕುಗಳನ್ನು ಜೂನ್ 5 ರೊಳಗೆ ಕೆ.ಸಿ. ದಯಾನಂದ, ಸಂಚಾಲಕರು, ಸ್ಮರಣ ಸಂಚಿಕೆ ಸಮಿತಿ ಅಥವಾ ಇವರ ಇ-ಮೇಲ್ ಜಚಿಥಿಚಿಟಿಚಿಟಿಜಚಿಞuಜಚಿಞಚಿಟಿಜi@gmಚಿiಟ.ಛಿom ಗೆ ಕಳುಹಿಸಿಕೊಡುವಂತೆ ತಿಳಿಸಿದ್ದಾರೆ.
ಸಾಂಸ್ಕøತಿಕ ಕಾರ್ಯಕ್ರಮ ತಂಡಗಳಿಗೆ
ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜೂನ್ 16 ರಂದು ಮಡಿಕೇರಿಯಲ್ಲಿ ನಡೆಯಲಿರುವ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೀಡಲು ಇಚ್ಛಿಸುವ ಮಡಿಕೇರಿ ತಾಲೂಕಿನ ಕಲಾವಿದರು ಕನ್ನಡ ನಾಡು-ನುಡಿ-ಸಂಸ್ಕøತಿ ಹಾಗೂ ಜನಪದಕ್ಕೆ ಸಂಬಂಧಿಸಿದಂತೆ ಕನ್ನಡ ಭಾಷೆಯ ಕಾರ್ಯಕ್ರಮವನ್ನು ನೀಡತಕ್ಕದ್ದು. ಅರ್ಜಿ ಸಲ್ಲಿಸಲು ಕಲಾತಂಡಗಳು ಕಾರ್ಯಕ್ರಮದ ವಿವರ, ಸಮಯ, ತಂಡದಲ್ಲಿರುವ ಕಲಾವಿದರ ಸಂಖ್ಯೆ ಹಾಗೂ ತಮ್ಮ ಸಂಪೂರ್ಣ ವಿಳಾಸದೊಂದಿಗೆ ದೂರವಾಣಿ ಸಂಖ್ಯೆಗಳನ್ನು ನಮೂದಿಸತಕ್ಕದ್ದು. ಹೆಸರು ನೋಂದಾಯಿಸಲು ಜೂನ್ 5 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸುವವರು ಭಾರತಿ ರಮೇಶ್, ಅಧ್ಯಕ್ಷರು, ಸಾಂಸ್ಕøತಿಕ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ ಕಚೇರಿ, ಕೋರ್ಟ್ ಹಿಂಭಾಗ, ಕೋಟೆ ಆವರಣ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬೇಕೆಂದು ಮನವಿ ಮಾಡಿದ್ದಾರೆ. ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ: 9448587915 ಅಥವಾ 9481058090, 8277829863 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಾಂಸ್ಕøತಿಕ ವಿಭಾಗದ ಅಧ್ಯಕ್ಷರು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ
ಸೋಮವಾರಪೇಟೆ ತಾಲೂಕಿನಲ್ಲಿರುವ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಬಾಲಕಿಯರ ವಿದ್ಯಾರ್ಥಿ ನಿಲಯ, ಕುಶಾಲನಗರದ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಬಾಲಕಿಯರ ವಿದ್ಯಾರ್ಥಿನಿಲಯ, ಕೊಡ್ಲಿಪೇಟೆಯ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯ, ಶನಿವಾರಸಂತೆ ಸಾರ್ವಜನಿಕ ಬಾಲಕಿಯರ ವಿದ್ಯಾರ್ಥಿನಿಲಯ, ಹೆಬ್ಬಾಲೆ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯ, ಕುಶಾಲನಗರದ ಗಿರಿಜನ ಬಾಲಕಿಯರ ವಿದ್ಯಾರ್ಥಿ ನಿಲಯ, ಯಡವನಾಡು, ಬಸವನಹಳ್ಳಿ ಮತ್ತು ಮಾಲಂಬಿ ಸರ್ಕಾರಿ ಆಶ್ರಮ ಶಾಲೆ ಈ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶ ಕೋರಿ 5ನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ.ಜಾತಿಯವರಿಗೆ ಶೇ.75 ಭಾಗ ಪ.ವರ್ಗದವರಿಗೆ ಮತ್ತು ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ಭಾಗ, ಪ.ವರ್ಗದವರಿಗೆ ಶೇ. 25 ಸ್ಥಾನಗಳನ್ನು ನಿಗದಿಪಡಿಸಲಾಗಿದೆ. ಅಲ್ಲದೇ ಗಿರಿಜನ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶೇ. 75 ಭಾಗ ಪ.ವರ್ಗದವರಿಗೆ ಹಾಗೂ ಶೇ. 25 ಭಾಗ ಪರಿಶಿಷ್ಟ ಜಾತಿ ಹಾಗೂ ಇತರ ವರ್ಗದವರಿಗೆ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.
ಸರ್ಕಾರಿ ಆಶ್ರಮ ಶಾಲೆಗಳಿಗೆ 1 ರಿಂದ 7ನೇ ತರಗತಿಯವರಿಗೆ ದಾಖಲು ಮಾಡಿಕೊಳ್ಳಲಾಗುವದು ಹಾಗೂ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯದಲ್ಲಿ ಉಚಿತವಾಗಿ ಊಟ, ವಸತಿ, ಸಮವಸ್ತ್ರ ಹಾಗೂ ಲೇಖನಿ ಸಾಮಗ್ರಿಗಳನ್ನು ಮತ್ತು ಪುಸ್ತಕಗಳನ್ನು ನೀಡಲಾಗುವದು. ಅರ್ಜಿ ಫಾರಂಗಳನ್ನು ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 12 ರೊಳಗೆ ಸಂಬಂಧಪಟ್ಟ ನಿಲಯದ ಮೇಲ್ವಿಚಾರಕರಿಗೆ ಸಲ್ಲಿಸತಕ್ಕದ್ದು. ತಡವಾಗಿ ಬಂದ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವದಿಲ.್ಲ ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಹಾಗೂ ನಿಲಯದ ಮೇಲ್ವಿಚಾರಕರುಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08276-281115 ನ್ನು ಸಂಪರ್ಕಿಸಬಹುದು.