ಮಡಿಕೇರಿ, ಮೇ 30: ವಿಶ್ವ ತಂಬಾಕು ಮುಕ್ತ ದಿನಾಚರಣೆಯ ಅಂಗವಾಗಿ ತಂಬಾಕು ವಿರೋಧಿ ಜಾಥವನ್ನು ಇಂದು ಜಿಲ್ಲಾಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ನಡೆಸಲು ನಿರ್ಧರಿಸಿರುವ ದಾಗಿ ಇಂಡಿಯನ್ ಡೆಂಟಲ್ ಅಸೋಸಿಯೇಷನ್‍ನ ಜಿಲ್ಲಾ ಉಪಾಧ್ಯಕ್ಷ ಡಾ. ಜಿತೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೆÀÇಲೀಸ್ ಇಲಾಖೆ, ಭಾರತೀಯ ದಂತ ವೈದ್ಯಕೀಯ ಸಂಘ ಹಾಗೂ ಕೊಡಗು ದಂತ ಮಹಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದಿಂದ ಬೆಳಿಗ್ಗೆ 10 ಗಂಟೆಗೆ ಜಾಗೃತಿ ಜಾಥ ಆರಂಭಗೊಳ್ಳಲಿದೆ. ನಗರದ ಗಾಂಧಿ ಮೈದಾನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಅವರು ಉದ್ಘಾಟಿಸುವ ಜಾಥ ಮಡಿಕೆÉೀರಿ, ನಾಪೆÇೀಕ್ಲು, ವೀರಾಜಪೇಟೆ, ಗೋಣಿಕೊಪ್ಪಲು, ಶ್ರೀಮಂಗಲ ಹಾಗೂ ಕುಟ್ಟದವರೆಗೆ ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೆÀÇಲೀಸ್ ವರಿಷ್ಠಾಧಿಕಾರಿಗಳಾದ ರಾಜೇಂದ್ರ ಪ್ರಸಾದ್, ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೆಲ್ವ ಕುಮಾರ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ಶ್ರೀರಂಗಪ್ಪ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷÀ ಸಿ.ಟಿ. ಜೋಸೆಫ್ ಹಾಗೂ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಉಪಸ್ಥಿತರಿರುವರು ಎಂದು ಡಾ. ಜಿತೇಶ್ ಮಾಹಿತಿ ನೀಡಿದರು.

ಇಂಡಿಯನ್ ಡೆಂಟಲ್ ಅಸೋಸಿಯೇಷನ್‍ನ ಜಿಲ್ಲಾ ಘಟಕದ ಅಧ್ಯಕ್ಷÀ ಡಾ. ಬೋಪಣ್ಣ ಮಾತನಾಡಿ, ಬಾಯಿ ಕ್ಯಾನ್ಸರ್‍ನಿಂದ ಮೃತಪಡುತ್ತಿರುವವರಲ್ಲಿ ವಿಶ್ವದಲ್ಲಿಯೇ ಭಾರತೀಯರ ಸಂಖ್ಯೆ ಹೆಚ್ಚು ಎಂದು ವಿಷಾದ ವ್ಯಕ್ತಪಡಿಸಿದರು. ಪ್ರತಿ ವರ್ಷ ದೇಶದಲ್ಲಿ 7.8 ಲಕ್ಷ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿ ದ್ದಾರೆ. ಇವರಲ್ಲಿ 2.50 ಲಕ್ಷ ಮಂದಿಗೆ ತಂಬಾಕಿನಿಂದ ಕ್ಯಾನ್ಸರ್ ಬರುತ್ತಿದೆ. ಪ್ರತಿ ವರ್ಷ ಈ ಕ್ಯಾನ್ಸರ್‍ನಿಂದ 2,200 ಮಂದಿ ಸಾವನ್ನಪ್ಪುತ್ತಿದ್ದಾರೆ. ಕ್ಯಾನ್ಸರ್ ಪೀಡಿತರಲ್ಲಿ 25 ರಿಂದ 45ರ ವಯೋಮಿತಿಯ ಮಂದಿಯೇ ಹೆಚ್ಚಾಗಿದ್ದಾರೆ. ತಂಬಾಕನ್ನು ಕೇಂದ್ರ ಸರ್ಕಾರ ಕಡ್ಡಾಯವಾಗಿ ನಿಷೇಧ ಮಾಡಬಹುದು. ಆದರೆ, ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ಬಂಡವಾಳಶಾಹಿಗಳ ಒತ್ತಡದಿಂದಾಗಿ ತಂಬಾಕನ್ನು ನಿಷೇಧಿಸಲು ಸಾಧ್ಯ ವಾಗುತ್ತಿಲ್ಲವೆಂದು ಡಾ. ಬೋಪಣ್ಣ ಅಭಿಪ್ರಾಯಪಟ್ಟರು.

ಇಂದು ನಡೆಯುವ ತಂಬಾಕು ವಿರೋಧಿ ಜಾಥಾದ ಸಂದರ್ಭ ಪ್ರತಿ ಪಟ್ಟಣದಲ್ಲಿ ತಂಬಾಕಿನಿಂದ ಆಗುವ ಅನಾಹುತಗಳ ಬಗ್ಗೆ ವಿವರಿಸಲಾಗುವದೆಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಬಾಯಿ ರೋಗ ವಿಭಾಗದ ಮುಖ್ಯಸ್ಥ ಡಾ. ಶಶಿಧರ್ ಉಪಸ್ಥಿತರಿದ್ದರು.