ಸೋಮವಾರಪೇಟೆ, ಮೇ 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ರೂ. 72 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಸರ್ಕಾರಿ ಬಸ್ ನಿಲ್ದಾಣದ ಮುಂದುವರೆದ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಪರಿಶೀಲಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಅಭಿವೃದ್ಧಿ ಕಾರ್ಯ ಗಳು ನಡೆಯುತ್ತಿವೆ. ಜನರಿಗೆ ಪ್ರಯೋಜನ ಕಲ್ಪಿಸುವ ನಿಟ್ಟಿನಲ್ಲಿ ನೂತನ ಕ್ರಮಗಳನ್ನು ಕೈಗೊಳ್ಳಲಾಗು ತ್ತಿದೆ ಎಂದ ವೀಣಾ ಅಚ್ಚಯ್ಯ ಅವರು, ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಭಾಗಕ್ಕೂ ಸರ್ಕಾರಿ ಬಸ್ ಸೇವೆಗಳನ್ನು ಒದಗಿಸಲು ಇಲಾಖೆ ಬದ್ಧವಾಗಿದೆ. ಈಗಾಗಲೇ ಸೋಮವಾರಪೇಟೆ ಮಾರ್ಗವಾಗಿ ನೂತನ ಬಸ್ ಸೇವೆಯನ್ನು ಒದಗಿಸಲಾಗಿದೆ ಎಂದು ನಿಗಮದ ನಿರ್ದೇಶಕ ಶೌಕತ್ ಆಲಿ ತಿಳಿಸಿದರು.

ಈ ಸಂದರ್ಭ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಪಕ್ಷದ ಮುಖಂಡರು ಗಳಾದ ಕೆ.ಎ. ಯಾಕೂಬ್, ಕೆ.ಪಿ. ಚಂದ್ರಕಲಾ, ಮಿಥುನ್, ಬಿ.ಬಿ. ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.