ವೀರಾಜಪೇಟೆ, ಮೇ 31: ನಗರ, ಪಟ್ಟಣ, ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿ ಕಸ ವಿಲೇವಾರಿ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿದೆ. ಅದರಂತೆ ವೀರಾಜಪೇಟೆ ಪಟ್ಟಣ ಪಂಚಾಯಿತಿ ಸ್ವಚ್ಛತೆ, ಕಸ ವಿಲೇವಾರಿಗೂ ಮೊದಲ ಆದ್ಯತೆ ನೀಡಿರುವದು ಶ್ಲಾಘನೀಯ. ಈ ನಿಟ್ಟಿನಲ್ಲಿ ವೀರಾಜಪೇಟೆ ಜಿಲ್ಲೆಯಲ್ಲಿಯೇ ಮಾದರಿ ಪಟ್ಟಣವಾಗಲಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ವೀರಾಜಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ 16 ವಾರ್ಡ್‍ಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕಿ ಚಾಲನೆ ನೀಡಿದ ಕೆ.ಜಿ. ಬೋಪಯ್ಯ, ಸ್ಥಳೀಯ ಸಂಸ್ಥೆಗಳಲ್ಲಿ ಕಸ ವಿಲೇವಾರಿ ಅಚ್ಚುಕಟ್ಟಾಗಿ ನಡೆದರೆ ಸ್ವಚ್ಛತೆ ಕಾಪಾಡಲು ಅನುಕೂಲವಾಗಲಿದೆ. ಕೇಂದ್ರ ಸರಕಾರವು ಪ್ರತಿಯೊಂದು ಪ್ರದೇಶದಲ್ಲಿ ಸ್ವಚ್ಛತೆಗಾಗಿ ವಿವಿಧ

ವೀರಾಜಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಕಸ ವಿಲೇವಾರಿ ಮಾಡುವ ಸಲುವಾಗಿ ಖರೀದಿಸಿದ್ದ ಎರಡು ಗೂಡ್ಸ್ ಟಿಪ್ಪರ್‍ಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.(ಮೊದಲ ಪುಟದಿಂದ) ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಎಲ್ಲ ಸಂಸ್ಥೆಗಳಲ್ಲಿ ಕಾರ್ಯರೂಪಕ್ಕೆ ಬಂದರೆ ಸ್ವಚ್ಛ ಭಾರತ ಎಂಬದು ಅರ್ಥಪೂರ್ಣವಾಗಲಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್ ಮಾತನಾಡಿ, ವೀರಾಜಪೇಟೆ ಪಟ್ಟಣ ಪಂಚಾಯಿತಿ ಆಡಳಿತ ಮೊದಲಿನಿಂದಲೂ ಸೂಕ್ತ ರೀತಿಯಲ್ಲಿ ಕಸ ವಿಲೇವಾರಿ ಮಾಡುವದರ ಮೂಲಕ ಕಾರ್ಮಿಕರಿಗೂ ಜೀವ ವಿಮೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿದೆ. ಪೌರ ಕಾರ್ಮಿಕರ ಸೇವೆಯು ಸ್ವಚ್ಛತೆಯಡಿಯಲ್ಲಿ ಪಟ್ಟಣಕ್ಕೆ ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂದು ಹೇಳಿದರು. ಪಟ್ಟಣ ಪಂಚಾಯಿತಿ ಅಭಿಯಂತರ ಎನ್.ಪಿ. ಹೇಮ್‍ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಕ್ರೀಡೆ, ಕಲಾ ವಿಭಾಗದಲ್ಲಿ ಸಾಧನೆ ಮಾಡಿದ 22 ಮಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಉತ್ತೇಜಿಸಲಾಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷೆ ತಸ್ನೀಂ ಅಕ್ತರ್, ಸ್ಥಾಯಿ ಸಮಿತಿ ಅಧ್ಯಕ್ಷ ರಚನ್ ಮೇದಪ್ಪ, ಮಾಜಿ ಅಧ್ಯಕ್ಷರುಗಳಾದ ಎಂ.ಕೆ. ದೇಚಮ್ಮ, ಸಚಿನ್ ಕುಟ್ಟಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ನಾಮ ನಿರ್ದೇಶಿತ ಸದಸ್ಯರುಗಳಾದ ಪಟ್ಟಡ ರಂಜಿ ಪೂಣಚ್ಚ, ಮಹ್ಮದ್ ರಾಫಿ ಡಿ.ಪಿ. ರಾಜೇಶ್, ಸದಸ್ಯರುಗಳು, ಮಹಿಳಾ ಸದಸ್ಯರುಗಳು ಉಪಸ್ಥಿತರಿದ್ದರು.

ಬಿ.ಜೆ.ಪಿ.ಯ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ರಘು ನಾಣಯ್ಯ, ನಗರ ಸಮಿತಿ ಅಧ್ಯಕ್ಷ ಅಂಜಪರವಂಡ ಅನಿಲ್, ಪ್ರಧಾನ ಕಾರ್ಯದರ್ಶಿ ಟಿ.ಜೆ. ದಿವಾಕರ್ ಶೆಟ್ಟಿ, ಕಾರ್ಯದರ್ಶಿ ಟಿ.ಎಂ. ಯೋಗೀಶ್ ನಾಯ್ಡು ಇತರ ಕಾರ್ಯಕರ್ತರು ಹಾಜರಿದ್ದರು.

ಪುರಭವನದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಯೋಜನಾಧಿಕಾರಿ ಶೈಲಾ ನಿರೂಪಿಸಿದರು.