*ಗೋಣಿಕೊಪ್ಪಲು, ಮೇ 31: ರೈತರು ಕೃಷಿಯಲ್ಲಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಜಿ.ಪಂ. ಸದಸ್ಯ ಬಾನಂಡ ಪ್ರಥ್ಯು ಹೇಳಿದರು.
ಪೊನ್ನಪ್ಪಸಂತೆ ಗ್ರಾ.ಪಂ. ಸಮುದಾಯ ಭವನದಲ್ಲಿ ನಡೆದ ಬಾಳೆಲೆ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸಿ, ತಾ.ಪಂ. ಸದಸ್ಯೆ ಬಿ.ಕೆ. ಸುಮಾ ಮಾತನಾಡಿ, ಸರಕಾರದ ಸೌಲಭ್ಯಗಳು ರೈತರಿಗೆ ನೇರವಾಗಿ ತಲುಪುವಂತಾಗಬೇಕು.
ಸಹಾಯಕ ಕೃಷಿ ನಿರ್ದೇಶಕಿ ರೀನಾ ಮಾತನಾಡಿ, ಕೃಷಿ ಭಾಗ್ಯ ಯೋಜನೆಯನ್ನು ಸರಕಾರ ಅನುಷ್ಠಾನಕ್ಕೆ ತಂದಿದ್ದು, ರೈತರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ. ರೈತರು ಈ ಯೋಜನೆಯಡಿಯಲ್ಲಿ ಕೃಷಿ ಹೊಂಡ, ಮಳೆ ಕೊಯ್ಲು, ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿ ಮೂಲಕ ಪಡೆದುಕೊಳ್ಳಬಹುದು. ಇಲಾಖೆಯ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪೊನ್ನಪ್ಪಸಂತೆ ಗ್ರಾ.ಪಂ. ಅಧ್ಯಕ್ಷೆ ಗುಲ್‍ಶಾದ್, ಆರ್.ಎಂ.ಸಿ. ಸದಸ್ಯ ಆದೇಂಗಡ ವಿನು ಚಂಗಪ್ಪ, ಬೆಳೆಗಾರರಾದ ಕುಶಾಲಪ್ಪ, ಸುಜಯ್ ಬೋಪಯ್ಯ, ಸೋಮೆಯಂಡ ತಿಮ್ಮಯ್ಯ, ಪೋಡಮಾಡ ಮೋಹನ್, ಬಾಳೆಲೆ ಹೋಬಳಿ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಮೀರಾ ಉಪಸ್ಥಿತರಿದ್ದರು.
ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಕೀಟ ಮತ್ತು ರೋಗ ಶಾಸ್ತ್ರಜ್ಞ ಡಾ. ವಿರೇಂದ್ರ ಕುಮಾರ್, ನಬಾರ್ಡ್ ಸಂಸ್ಥೆ ಜಿಲ್ಲಾ ಪ್ರಬಂಧಕ ಎಂ.ಸಿ. ನಾಣಯ್ಯ, ಜಲ ಯೋಧ ಅಜ್ಜಿಕುಟ್ಟಿರ ಎಂ. ಸೂರಜ್, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಮಣ್ಣು ವಿಜ್ಞಾನಿ ಡಾ. ರವಿಕುಮಾರ್ ಭಾಗವಹಿಸಿದ್ದರು.