ಕೂಡಿಗೆ, ಜೂ. 1: ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರು, ನಿಲಯ ಮೇಲ್ವಿಚಾರಕರು, ಅಡುಗೆಯವರು, ಅಡುಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರುಗಳಿಗೆ ಒಂದು ದಿನದ ಪುನಶ್ಚೇತನ ಕಾರ್ಯಾಗಾರವು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ವಿಜು ಸುಬ್ರಮಣಿ ಉದ್ಘಾಟಿಸಿ, ವಸತಿ ಶಾಲೆಗಳು ಮತ್ತು ವಸತಿ ನಿಲಯಗಳು ಸುವ್ಯವಸ್ಥೆ ಹಾಗೂ ಚಟುವಟಿಕೆಯಿಂದ ಇದ್ದು, ಮಾನಸಿಕವಾಗಿ ಸಿದ್ಧತೆ ಹಾಗೂ ಸಮಾನ ಜವಾಬ್ದಾರಿಯನ್ನು ಕಾಪಾಡಿಕೊಂಡಾಗ ಶಾಲೆಯ ಪ್ರಗತಿ ಸಾಧ್ಯ. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಆರೋಗ್ಯದಿಂದ ಇರಲು ಉತ್ತಮ ಆಹಾರ ನೀಡಿದರೆ, ಉತ್ತಮ ಅಂಕಗಳನ್ನು ನಿರೀಕ್ಷಿಸಲು ಅನುಕೂಲವಾಗುವದು. ಆಶ್ರಮ ಶಾಲೆಗಳಲ್ಲಿ ಸುವ್ಯವಸ್ಥಿತವಾದ ರಕ್ಷಣೆ ಹಾಗೂ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದಾಗ ಪೋಷಕರು ಹರ್ಷ ಪಡುವದರ ಜೊತೆಗೆ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಸರ್ಕಾರಿ ವಸತಿ ಶಾಲೆಗಳಿಗೆ ದಾಖಲು ಮಾಡಿರುತ್ತಾರೆ. ಇದನ್ನರಿತು ನಾವುಗಳು ಪ್ರಾಮಾಣಿಕವಾಗಿ, ಜವಾಬ್ದಾರಿಯುತ ಕಾರ್ಯನಿರ್ವಹಿಸಿದ್ದಲ್ಲಿ ಯಾವದೇ ರೀತಿಯ ಸಮಸ್ಯೆಯು ಉದ್ಭ್ಬವವಾಗುವದಿಲ್ಲ ಎಂದರು.

ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ವಿ. ಸುರೇಶ್ ಮಾತನಾಡಿ, ಜಿಲ್ಲೆಯಲ್ಲಿ 36 ವಸತಿ ನಿಲಯಗಳು ಹಾಗೂ 6 ವಸತಿ ಶಾಲೆಗಳಿದ್ದು, ಈ ಶಾಲೆಗಳಲ್ಲಿ ಹೆಚ್ಚು ಗ್ರಾಮೀಣ ಪ್ರದೇಶದ ಬಡ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ತಮ್ಮೆಲ್ಲರ ಭಾಗವಹಿಸುವಿಕೆ, ಉತ್ತಮವಾದ ಸ್ಪಂದನ ಬೇಕಾಗುತ್ತದೆ ಎಂದರು. ಕೊಡ್ಲಿಪೇಟೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಶೇಖರ್ ಮಾದರಿ ವಿದ್ಯಾರ್ಥಿ ನಿಲಯವನ್ನು ನಿರ್ವಹಣೆ ಮಾಡುವದರ ಕುರಿತು ತರಬೇತಿ ನೀಡಿದರು.

ಕುಶಾಲನಗರ ಸಹಾಯಕ ಗ್ರಂಥಪಾಲಕಿ ಎ.ಎಸ್. ಚಿತ್ರಾ ಗ್ರಂಥಾಲಯ ನಿರ್ವಹಣೆ ಮತ್ತು ಬಳಕೆಯ ಬಗ್ಗೆ ಮಾಹಿತಿ ನೀಡಿದರು.

ಪೊನ್ನಂಪೇಟೆ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಜಾಲಿ ಶಿಸ್ತು ಮತ್ತು ಸಮಯ ಪಾಲನೆ ಬಗ್ಗೆ, ನಿವೃತ್ತ ಉಪನ್ಯಾಸಕ ಸುಂದರ್ ನಿಲಯಗಳ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮಹೇಶ್ ನಿಲಯಗಳಲ್ಲಿ ಶಿಸ್ತು ಮತ್ತು ಕಾನೂನು ಅರಿವಿನ ಬಗ್ಗೆ, ಕುಶಾಲನಗರ ವೈದ್ಯಾಧಿಕಾರಿ ಡಾ. ರವಿಚಂದ್ರ ಪ್ರಥಮ ಚಿಕಿತ್ಸೆ ಮತ್ತು ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆಗಳ ಮತ್ತು ಪರಿಹಾರದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ತರಬೇತುದಾg Àರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಕೂಡಿಗೆ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್, ಜಿಲ್ಲೆಯ ತಾಲೂಕು ಸಂಪನ್ಮೂಲ ವ್ಯಕ್ತಿಗಳು ಮತ್ತು ವಿಸ್ತರಣಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.