ಮಡಿಕೇರಿ, ಜೂ. 1: ಸಾರ್ವಜನಿಕ ಶಿಕ್ಷಣ ಇಲಾಖೆಯ ಉತ್ತೇಜನ ಕಾರ್ಯಕ್ರಮಗಳಾದ ಉಚಿತ ಪಠ್ಯಪುಸ್ತಕ, ಉಚಿತ ಸಮವಸ್ತ್ರ ಶೂ ಮತ್ತು ಸಾಕ್ಸ್ ವಿತರಣೆ ಮತ್ತು ಶಾಲಾ ಮಕ್ಕಳಿಗೆ ಸೈಕಲ್ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಎಂ.ಪಿ. ಅಪ್ಪಚು ್ಚರಂಜನ್ ಅಧ್ಯಕ್ಷತೆಯಲ್ಲಿ ತಾ. 2 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿ.ಪಂ. ಸಿಇಓ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಇತರರು ಭಾಗವಹಿಸಲಿದ್ದಾರೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.