ಮಡಿಕೇರಿ, ಜೂ. 1: ಸರ್ಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮಗಳಲ್ಲಿ ಒಂದಾದ ಕೌಶಲ್ಯ ಕರ್ನಾಟಕ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 1757 ಮಂದಿ ಹೆಸರು ನೋಂದಾಯಿಸಿಕೊಂಡಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಹೆಸರು ನೋಂದಾಯಿಸಿ ಕೊಳ್ಳುವಂತಾಗಲು ಸಂಘ-ಸಂಸ್ಥೆಗಳು, ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಡಾ. ವಿನ್ಸೆಂಟ್ ಡಿಸೋಜ ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ನಿರುದ್ಯೋಗಿ ಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ವೃತ್ತಿ ಕೌಶಲ್ಯ ತರಬೇತಿ ಹಮ್ಮಿಕೊಳ್ಳಲು ಸಹಕಾರಿ ಯಾಗಲಿದೆ ಎಂದು ಹೇಳಿದರು.
ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಕಾಲೇಜು, ಐಟಿಐ, ಮಹಿಳಾ ಸಂಘಟನೆಗಳು, ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿ ರುವವರು ತಮ್ಮ ವ್ಯಾಪ್ತಿಯಲ್ಲಿನ ಯುವ ಜನರು ಕೌಶಲ್ಯ ಅಭಿವೃದ್ಧಿ ಯೋಜನೆ ಯಡಿ ಹೆಸರು ನೋಂದಾಯಿಸಿ ಕೊಳ್ಳುವಂತಾಗಲು ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಈ ಯೋಜನೆಯ ಅಡಿಯಲ್ಲಿ 18 ರಿಂದ 35 ವರ್ಷ ವಯೋಮಾನದ ನಿರುದ್ಯೋಗ ಯುವಕ-ಯುವತಿ ಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಆಸಕ್ತ ನಿರುದ್ಯೋಗ ಯುವಕ-ಯುವತಿಯರು ತಮ್ಮ ಹೆಸರನ್ನು ಅಂತರ್ಜಾಲ ತಾಣ ತಿತಿತಿ.ಞಚಿushಚಿಟಞಚಿಡಿ.ಛಿom ದ ಮೂಲಕ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ.
ತರಬೇತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಇಲ್ಲಿ ನೋಂದಾಯಿಸ ಬಹುದಾಗಿದೆ. ಅಲ್ಲದೇ ಅಭ್ಯರ್ಥಿಗಳು ಞಚಿushಚಿಟಞಚಿಡಿ ಮೊಬೈಲ್ ಆ್ಯಪ್ ಮೂಲಕ ನೋಂದಾಯಿಸ ಬಹುದಾಗಿರುತ್ತದೆ. ಹೆಚ್ಚಿನ ವಿವರಗಳನ್ನು ತಿತಿತಿ.ಞಚಿushಚಿಟಞಚಿಡಿ. ಛಿom ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಜಗನ್ನಾಥ್ ತಿಳಿಸಿದರು.
ಜಿ.ಪಂ. ಯೋಜನಾ ನಿರ್ದೇಶಕ ಸಿದ್ದಲಿಂಗಮೂರ್ತಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಪಾರ್ವತಿ ಅಪ್ಪಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಮಮ್ತಾಜ್, ಬಿಸಿಎಂ. ಇಲಾಖಾ ಅಧಿಕಾರಿ ಕೆ.ವಿ. ಸುರೇಶ್, ಐಟಿಡಿಪಿ ಅಧಿಕಾರಿ ಪ್ರಕಾಶ್, ಪೌರಾಯುಕ್ತೆ ಬಿ.ಕೆ. ಶುಭ, ಉಪ ವಿಭಾಗಾಧಿಕಾರಿ ಡಾ. ನಂಜುಂಡೇ ಗೌಡ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮಹಮ್ಮದ್ ಮುನೀರ್ ಇತರರು ಹಲವು ಮಾಹಿತಿ ನೀಡಿದರು.