ಕೂಡಿಗೆ, ಜೂ. 1: ಗ್ರಾಮಾಂತರ ಪ್ರದೇಶದ ಬಡಮಕ್ಕಳು ಸರಕಾರ ದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ಪಡೆಯಲು ಹಿಂದುಳಿದ ವರ್ಗಗಳ ವಸತಿ ನಿಲಯಗಳನ್ನು ಹಾಗೂ ವಸತಿ ಶಾಲೆಗಳನ್ನು ಅಲವಂಭಿಸಿ ಪೋಷಕರು ತಮ್ಮ ಮಕ್ಕಳನ್ನು ವಸತಿ ಶಾಲೆಗೆ ದಾಖಲು ಮಾಡುತ್ತಾರೆ. ಬಡವರಿಗೆ ಮಕ್ಕಳೇ ಆಸ್ತಿಯಾಗಿದ್ದು, ಅವರಿಗೆ ಸೌಲಭ್ಯ ಒದಗಿಸುವದು ನಮ್ಮ ಕರ್ತವ್ಯ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರÀ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ವಿ. ಸುರೇಶ್ ಹೇಳಿದರು.

ಕೂಡಿಗೆಯಲ್ಲಿ ನಡೆದ ಪುನಶ್ಚೇತನ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ, ಬಡ ಮಕ್ಕಳು ತಮ್ಮ ವಿದ್ಯಾರ್ಜನೆಯನ್ನು ಹೆಚ್ಚಿಸಿಕೊಂಡು ಉನ್ನತ ಮಟ್ಟದ ವ್ಯಾಸಂಗ ಮಾಡಲು ಅವರು ಅಭ್ಯಾಸಿಸುವ ವಸತಿ ಶಾಲೆ ಹಾಗೂ ವಸತಿ ನಿಲಯಗಳು ಸಮರ್ಪಕವಾಗಿ ಸರಕಾರದ ಸೌಲಭ್ಯಗಳನ್ನು ನೀಡುವದರ ಮೂಲಕ ವಿದ್ಯಾರ್ಜನೆಗೆ ಪ್ರೋತ್ಸಾಹಿಸು ವಂತಾಗಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಕೂಡಿಗೆ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್, ಜಿಲ್ಲೆಯ ತಾಲೂಕು ಸಂಪನ್ಮೂಲ ವ್ಯಕ್ತಿಗಳು ಮತ್ತು ವಿಸ್ತರಣಾಧಿಕಾರಿಗಳು ಉಪಸ್ಥಿತರಿದ್ದರು.