ಕುಶಾಲನಗರ: ಪ್ರತಿಯೊಬ್ಬರಿಗೂ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರಕಾರ ಹಲವಾರು ಸೌಲಭ್ಯಗಳನ್ನು ಒದಗಿಸಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದರು.ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ದಾಖಲಾತಿ ಆಂದೋಲನ, ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸಾಧನೆ ತೋರಲು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶ್ರಮವಹಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎನ್. ವಸಂತಕುಮಾರ್ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಮಾತನಾಡಿದರು.
ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ ಪ್ರಾಸ್ತಾವಿಕ ನುಡಿಗಳಾಡಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 91 ಅಂಕಗಳಿಸಿದ ವಿದ್ಯಾರ್ಥಿ ಕೆ.ಎಸ್. ಅಖಿಲೇಶ್ ಅವರನ್ನು ಗೌರವಿಸಲಾಯಿತು.
ಕಾಲೇಜು ಪ್ರಾಂಶುಪಾಲ ಸತೀಶ್‍ಬಾಬು, ಉಪ ಪ್ರಾಂಶುಪಾಲರು, ಶಿಕ್ಷಣಾಧಿಕಾರಿ ರಾಜಶೇಖರ್, ಮಹದೇವ್, ಪರಶಿವಮೂರ್ತಿ, ಕೃಷ್ಣಪ್ಪ, ಕರಾವಿಪ ಅಧ್ಯಕ್ಷ ಫಿಲಿಪ್ ವಾಸ್ ಇದ್ದರು.
ವಿದ್ಯಾರ್ಥಿನಿ ಐಶ್ವರ್ಯ ಮತ್ತು ತಂಡ ಪ್ರಾರ್ಥನೆ, ಶಿಕ್ಷಕರಾದ ದಿವ್ಯ ಮತ್ತು ಮಹೇಂದ್ರ ಕಾರ್ಯಕ್ರಮ ನಿರೂಪಿಸಿದರು, ದಿನೇಶ್ ವಂದಿಸಿದರು.