ಮಡಿಕೇರಿ, ಜೂ. 3: ಪ್ರಸಕ್ತ (2017-18ನೇ) ಸಾಲಿನ ಕರ್ನಾಟಕ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ/ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಎಸ್.ಸಿ/ಎಸ್.ಟಿ/ಅಲ್ಪಸಂಖ್ಯಾತರ/ಸ್ಥಾಪಿಸುವ ಮೂಲಕ ಸ್ವ ಉದ್ಯೋಗ ಮಾಡಿಕೊಳ್ಳುವವರಿಗೆ ಬ್ಯಾಂಕಿನಿಂದ ಗರಿಷ್ಠ 10 ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ. 25 ರಿಂದ 35 ರವರೆಗೆ ಸಹಾಯ ಧನವನ್ನು ನೀಡಲಾಗುವದು. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಪರಿಗಣಿಸಲಾಗುವದಿಲ್ಲ. ಅರ್ಜಿ ಸಲ್ಲಿಸಲು ತಾ. 12 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ ಕಚೇರಿಯನ್ನು ಹಾಗೂ ದೂ.ಸಂ: 08272-225946 ನ್ನು ಸಂಪರ್ಕಿಸಬಹುದು.

ವಿದ್ಯಾರ್ಥಿ ವೇತನಕ್ಕೆ

ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2017-18ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮದರಸಾದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಂದ ಶುಲ್ಕವಿನಾಯಿತಿ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಮದರಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಮಾತ್ರ ಈ ಯೋಜನೆಗೆ ಅರ್ಹರಿರುತ್ತಾರೆ. ಮದರಸ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳನ್ನು ಎನ್.ಐ.ಒ.ಎಸ್ ಅಥವಾ ಐಜಿಎನ್‍ಒಯು ಮತ್ತು ಯಾವದೇ ಸರ್ಕಾರಿ ಮುಕ್ತ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.

2016-17ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಕೂಡ ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡುವದು. ಹೆಚ್ಚಿನ ವಿವರಗಳಿಗೆ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನಿಂದ ಪಡೆಯಬಹುದು. ಅಗತ್ಯ ಮಾಹಿತಿಗೆ 080-22863617/ 22863618 ನ್ನು ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ. 08272-225628 ನ್ನು ಸಂಪರ್ಕಿಸಬಹುದು.

ಸಹಾಯ ಧನಕ್ಕೆ

ಅಲ್ಪಸಂಖ್ಯಾತ ಸಮುದಾಯದವರಿಗೆ ವಿವಿಧ ಸಹಾಯ ಧನಕ್ಕಾಗಿ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2017-18ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಮತ್ತು ಬೌದ್ಧ ಜನಾಂಗದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ, ಹೆಚ್.ಐ.ವಿ. ಏಡ್ಸ್, ವಿಕಲಚೇತನ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸೇವಾ ಸಂಸ್ಥೆಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಕಾರ್ಯ ಕ್ರಮವಿರುತ್ತದೆ. ಆಸಕ್ತಿಯುಳ್ಳ ಸಂಸ್ಥೆಯವರು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿಗೆ ಸಹಾಯ ಧನಕ್ಕಾಗಿ ಕೋರಿ ಅರ್ಜಿ ಸಲ್ಲಿಸಬಹುದು. ಅರ್ಜಿ ಅಕ್ಟೋಬರ್ 30 ರೊಳಗೆ ಸಲ್ಲಿಸಬಹುದು.

ಅರ್ಜಿ ಹಾಗೂ ಹೆಚ್ಚಿನ ವಿವರಗಳನ್ನು ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಇಲಾಖಾ ವೆಬ್‍ಸೈಟ್ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಈ ಕಚೇರಿಯನ್ನು ಹಾಗೂ ದೂ. 08272-225628 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಪರೀಕ್ಷಾ ಪೂರ್ವ ತರಬೇತಿಗೆ

ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರ ವತಿಯಿಂದ 2017-18ನೇ ಸಾಲಿಗೆ ಅಲ್ಪಸಂಖ್ಯಾತ (ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ, ಬೌದ್ಧ ಮತ್ತು ಜೈನ್) ಸಮುದಾಯದ ವಿದ್ಯಾರ್ಥಿಗಳಿಗೆ ಎನ್‍ಇಇಟಿ ಮತ್ತು ಸಿಇಟಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ತಾ. 15 ರ ಸಂಜೆ 5 ಗಂಟೆಯೊಳಗೆ ನಿರ್ದೇಶನಾಲಯಕ್ಕೆ ಸಲ್ಲಿಸುವದು. ಹೆಚ್ಚಿನ ವಿವರಗಳನ್ನು ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಇಲಾಖಾ ವೆಬ್‍ಸೈಟ್‍ನಲ್ಲಿ ಪಡೆಯಬಹುದು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಹಾಗೂ ಇಲ್ಲಿನ ದೂ. 08272-225628 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಕೆ.ವಿ. ಸುರೇಶ್ ಕೋರಿದ್ದಾರೆ.