ಮಡಿಕೇರಿ, ಜೂ. 3: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವೆಗಳ ಪ್ರಾಧಿಕಾರದ ಸಹಕಾರದೊಂದಿಗೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ತಾ. 5 ರಂದು (ನಾಳೆ) ಸ್ವಚ್ಛ ಪರಿಸರಕ್ಕಾಗಿ ಹಾಗೂ ಸ್ವಚ್ಛ ಕಾವೇರಿಗಾಗಿ ಕಾಲ್ನಡಿಗೆ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ತಿಳಿಸಿದ್ದಾರೆ,

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಮಡಿಕೆÉೀರಿಯಿಂದ ಕುಶಾಲನಗರದವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಈ ಸಂದರ್ಭ ಕಾವೇರಿಯ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲಾಗುವದೆಂದು ತಿಳಿಸಿದರು.

ಬೆಳಿಗ್ಗೆ 7.30 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್ ಈ ಸಂದರ್ಭ ಹಾಜರಿರುವರು ಎಂದು ಚಂದ್ರಮೋಹನ್ ಮಾಹಿತಿ ನೀಡಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅರಣ್ಯ ಇಲಾಖೆ, ಕೊಡಗು ಜಿಲ್ಲಾ ಪೊಲೀಸ್, ಪದವಿಪೂರ್ವ ಶಿಕ್ಷಣ ಇಲಾಖೆ, ನಗರಸಭೆÉ, ಕುಶಾಲನಗರ ಪಟ್ಟಣ ಪಂಚಾಯಿತಿ, ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ವಿಜ್ಞಾನ ಪರಿಷತ್, ಗ್ರೀನ್ ಸಿಟಿ ಫೋರಂ, ಕಾಲ್ನಡಿಗೆ ಜಾಥಾಕ್ಕೆ ಸಹಕಾರ ನೀಡುತ್ತಿವೆ. ಮಡಿಕೆÉೀರಿಯಿಂದ ಆರಂಭಗೊಳ್ಳುವ ಜಾಥಾ ಸುಂಟಿಕೊಪ್ಪ ಮಾರ್ಗವಾಗಿ ಕುಶಾಲನಗರದ ಅಯ್ಯಪ್ಪ ದೇವಸ್ಥಾನದವರೆಗೆ ನಡೆಯಲಿದೆ.

ಅಂದು ಬೆಳಿಗ್ಗೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಡಿಕೆÉೀರಿಯ ಚೈನ್ ಗೇಟ್ ಬಳಿ ಉಪ ಅರಣ್ಯ ಸಂರಕ್ಷÀಣಾಧಿಕಾರಿ ಸೂರ್ಯಸೇನ್ ಚಾಲನೆ ನೀಡಲಿದ್ದಾರೆ. ‘ಮೈ ಟ್ರೀ’ ಯೋಜನೆಗೆ ಸುಂಟಿಕೊಪ್ಪದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯ ನಿವರ್Àಹಣಾಧಿಕಾರಿ ಚಂದ್ರಶೇಖರ್ ಚಾಲನೆ ನೀಡಲಿದ್ದಾರೆ ಎಂದರು. ಪ್ರಾಣಿ ಮತ್ತು ಪಕ್ಷಿಗಳ ಆಹಾರಕ್ಕಾಗಿ ಸುಮಾರು 10 ಲಕ್ಷ ಬೀಜ ಬಿತ್ತನೆ ಕಾರ್ಯಕ್ರಮಕ್ಕೆ ಆನೆಕಾಡು ಅತ್ತೂರು ಮೀಸಲು ಅರಣ್ಯ ಪ್ರದೇಶದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್. ಚಿಣ್ಣಪ್ಪ ಚಾಲನೆ ನೀಡಲಿದ್ದಾರೆ. ಇದೇ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ.

ಅಂದು ಸಂಜೆ 4.30 ಗಂಟೆಗೆ ಸಮಾರೋಪ ಸಮಾರಂಭ ಕುಶಾಲನಗರದ ಶ್ರೀ ಅಯ್ಯಪ್ಪ ದೇವಸ್ಥಾನದ ಸಮೀಪ ಕಾವೇರಿ ನದಿ ತಟದಲ್ಲಿ ನಡೆಯಲಿದೆ. ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾವೇರಿ ನದಿ ಸ್ವಚ್ಛತಾ ಆಂದೋಲನದ ಕರ್ನಾಟಕ-ತಮಿಳುನಾಡು ಪ್ರಾಂತದ ಸಂಚಾಲಕ ಭಾನು ಪ್ರಕಾಶ್ ಶರ್ಮಾ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕ ಲಿಂಗರಾಜು ಹಾಗೂ ಕಾವೇರಿ ನದಿ ಜಾಗೃತಿ ಸಮಿತಿಯ ಅಧ್ಯಕ್ಷ ಡಿ.ಆರ್. ಸೋಮಶೇಖರ್ ಅವರನ್ನು ಸನ್ಮಾನಿಸಲಾಗುವದೆಂದು ಚಂದ್ರಮೋಹನ್ ತಿಳಿಸಿದರು.

32 ಕಿ.ಮೀ. ದೂರದ ಕಾಲ್ನಡಿಗೆ ಜಾಥಾ ಸಂದರ್ಭ ಸಿಗುವ ಕಸ, ಕಡ್ಡಿ, ತ್ಯಾಜ್ಯವನ್ನು ಸಂಗ್ರಹಿಸಿ ಪರಿಸರ ಸ್ವಚ್ಛಗೊಳಿಸಲಾಗುವದೆಂದು ಹೇಳಿದರು.

ಸಮಿತಿಯ ಜಿಲ್ಲಾ ಸಂಚಾಲಕಿ ರೀನಾ ಪ್ರಕಾಶ್ ಮಾತನಾಡಿ, ಕೊಡಗಿನ ಪೂಂಪುಹಾರ್‍ವರೆಗೆ ಕಾವೇರಿ ನದಿಯ ಸ್ಥಿತಿಗತಿಯ ಕುರಿತು ನಡೆಸಿದ ಸರ್ವೆ ಕಾರ್ಯದ ವರದಿಯನ್ನು ಪ್ರಧಾನ ಮಂತ್ರಿಗಳಿಗೆ ಮುಂದಿನ ತಿಂಗಳು ನೀಡಲಾಗುವದೆಂದು ತಿಳಿಸಿದರು. ಸ್ವಚ್ಛ ಗಂಗಾ ಯೋಜನೆಯ ರೀತಿಯಲ್ಲಿ ಕಾವೇರಿ ನದಿಯ ಸ್ವಚ್ಛತೆಗೂ ಯೋಜನೆಯನ್ನು ರೂಪಿಸಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪಿಂಡ ಪ್ರಧಾನ ಕಾರ್ಯಕ್ಕೆ ಪರ್ಯಾಯ ವ್ಯವಸ್ಥೆ ಮಾಡುವದರಿಂದ ಸಂಗಮದಲ್ಲಿ ಭಕ್ತರು ಶುದ್ಧ ನೀರಿನಲ್ಲಿ ಸ್ನಾನ ಮಾಡಬಹುದೆಂದು ಅಭಿಪ್ರಾಯಪಟ್ಟರು. ಸಿದ್ದಾಪುರ ವ್ಯಾಪ್ತಿಯಲ್ಲಿ ಅನೇಕ ಮನೆಗಳ ಕೊಳಚೆ ನೀರು ಕಾವೇರಿ ನದಿಯನ್ನು ಸೇರುತ್ತಿದ್ದು, ಇದನ್ನು ತಡೆಯಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಚೆಯ್ಯಂಡ ಸತ್ಯ, ಕುಶಾಲನಗರ ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ನಂಜುಂಡಸ್ವಾಮಿ ಕಾವೇರಿ ನದಿ ಜಾಗೃತಿ ಸಮಿತಿ ಅಧ್ಯಕ್ಷ ಡಿ.ಆರ್. ಸೋಮಶೇಖರ್, ಪ್ರಮುಖ ಶಿವಾನಂದ ಜಾಥಾಕ್ಕೆ ಬೆಂಬಲ ಸೂಚಿಸಿದರು.