ಮಡಿಕೇರಿ, ಜೂ. 4: ಪ್ರಸಕ್ತ (2017-18ನೇ) ಸಾಲಿಗೆ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದಲ್ಲಿ ಪ್ರೋತ್ಸಾಹ ಧನ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.

ಷರತ್ತುಗಳು: ಅಂತರ್ ಜಾತಿ ವಿವಾಹವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದವರಾಗಿರ ಬೇಕು. ಈ ಸೌಲಭ್ಯ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವತಿಯರ ವಯೋ ಮಾನವು ಕನಿಷ್ಟ 18 ವರ್ಷದಿಂದ ಗರಿಷ್ಠ 42 ವರ್ಷಗಳಾ ಗಿರತಕ್ಕದ್ದು. ಈ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ದಂಪತಿಗಳ ಒಟ್ಟಾರೆ ವಾರ್ಷಿಕ ಆದಾಯ ರೂ. 2 ಲಕ್ಷಗಳನ್ನು ಮೀರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ-ಯುವತಿಯರು ಮದುವೆಯಾದ ಒಂದು ವರ್ಷದ ಅವಧಿಯೊಳಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸತಕ್ಕದ್ದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ-ಯುವತಿಯರು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಮುಂಚೆ ಉಪ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ವಿವಾಹದ ಬಗ್ಗೆ ನೋಂದಾಯಿಸಿರಬೇಕು. ಈ ಸೌಲಭ್ಯವನ್ನು ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದ ಯುವಕ ವಾಸ್ತವ್ಯವಿರುವ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಸ್ಪøಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ ಜಾತಿ ವಿವಾಹ ಅಥವಾ ವಿಧವೆಯರ ಮರು ವಿವಾಹ ಯೋಜನೆಗಳಡಿ ಪ್ರೋತ್ಸಾಹ ಧನ ಪಡೆದವರು ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿಲ್ಲ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ, ಯುವತಿಯರು ಸರಳ ವಿವಾಹ ಕಾರ್ಯಕ್ರಮದಡಿ ಮದುವೆಯಾದಲ್ಲಿ, ಅಂತಹವರುಗಳು ಈ ಯೋಜನೆ ಯಡಿಯಲ್ಲಿ ಸರಳ ವಿವಾಹದ ರೂ. 50 ಸಾವಿರ ಹೊರತುಪಡಿಸಿ ಉಳಿದ ರೂ. 1.50 ಲಕ್ಷ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಹರಿರುತ್ತಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ-ಯುವತಿಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಿಯಲ್ಲಿ ಒಂದೇ ಸಂಖ್ಯೆಯಲ್ಲಿ ನಮೂದಿಸಿರುವ ಸಮನಾಂತರ ಜಾತಿಗಳ ಒಳಗೆ ಮದುವೆಯಾದಲ್ಲಿ ಈ ಪ್ರೋತ್ಸಾಹ ಧನ ಪಡೆಯಲು ಅರ್ಹರಿರುವದಿಲ್ಲ. ಮಂಜೂರಾದ ಪ್ರೋತ್ಸಾಹ ಧನದ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದ ದಂಪತಿಗಳ ಜಂಟಿ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಎನ್‍ಇಇಟಿ ಮೂಲಕ ಜಮಾ ಮಾಡಲಾಗುವದು.

ಅರ್ಜಿ ಸಲ್ಲಿಸಲು ತಾ. 20 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಇಲ್ಲಿಂದ ಪಡೆಯಬಹುದು.