ಭಾಗಮಂಡಲ, ಜೂ. 4: ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಭಾಗಮಂಡಲ, ತಾವೂರು, ತಣ್ಣಿಮಾನಿ, ಚೇರಂಗಾಲ ಮತ್ತು ಕೋರಂಗಾಲ ಗ್ರಾಮಗಳ ಗ್ರಾಮಸಭೆ ತಾ. 6 ರಂದು ಪೂರ್ವಾಹ್ನ 11 ಗಂಟೆಗೆ ಭಾಗಮಂಡಲ ಗೌಡ ಸಮಾಜದಲ್ಲಿ ಪಂಚಾಯಿತಿ ಅಧ್ಯಕ್ಷೆ ಸುಮಿತ್ರ ಅಧ್ಯಕ್ಷತೆಯಲ್ಲಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಪ್ರಭಾಕರ್ ಮತ್ತು ತಾಲೂಕು ಪಂಚಾಯಿತಿ ಸದಸ್ಯೆ ಎಂ.ಕೆ. ಸಂಧ್ಯಾ ಅವರ ಸಮ್ಮುಖದಲ್ಲಿ ನಡೆಯಲಿದೆ.