ಮಡಿಕೇರಿ ಜೂ.5 : ಜನವಸತಿಯ ಗ್ರಾಮಗಳನ್ನು ಒಳಗೊಂಡಂತೆ ತಲಕಾವೇರಿ ವನ್ಯಧಾಮ ಮತ್ತು ಪಟ್ಟಿಘಾಟ್ ಅರಣ್ಯ ಪ್ರದೇಶವನ್ನು ಕೇಂದ್ರ ಸರ್ಕಾರ ಜನರ ಭಾವನೆಗಳಿಗೆ ಬೆಲೆ ನೀಡದೆ ಸೂಕ್ಷ್ಮ ಪರಿಸರ ವಲಯವನ್ನಾಗಿ ಘೋಷಿಸಿದೆ ಎಂದು ನಾಪೆÀÇೀಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿ ಆರೋಪಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಪೆÀÇೀಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎಸ್.ರಮಾನಾಥ್, ಪರಿಸರ ಸೂಕ್ಷ್ಮ ಪ್ರದೇಶದ ವಿವಾದದ ಜವಾಬ್ದಾರಿಯನ್ನು ತನ್ನ ಹೆಗಲಿಗೆ ಬಿಡಿ ಎಂದು ಹೇಳಿದ್ದ ಸಂಸದ ಪ್ರತಾಪ್ ಸಿಂಹ ಇದೀಗ ಜನರ ತಲೆಯ ಮೇಲೆ ಕಲ್ಲು ಹೇರಿ ನೆಮ್ಮದಿಯಾಗಿದ್ದಾರೆ ಎಂದು ಟೀಕಿಸಿದರು.

ಕರ್ನಾಟಕ ರಾಜ್ಯ ಸರ್ಕಾರದ ಆಕ್ಷೇಪಣೆಗಳನ್ನು ಕೇಂದ್ರ ಸರಕಾರ ಕಡೆಗಣಿಸಿದೆ. ಪ್ರಸ್ತುತ ಭಾಗಮಂಡಲ ಗ್ರಾಪಂ ವ್ಯಾಪ್ತಿಗೆ ಒಳಪಟ್ಟ ಭಾಗಮಂಡಲ, ತಣ್ಣಿಮಾನಿ, ಚೇರಂಗಾಲ, ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಣ್ಣ ಪÀÅಲಿಕೋಟು, ಅಯ್ಯಂಗೇರಿ, ಬಲ್ಲಮಾವಟಿ, ಪೇರೂರು ಹಾಗೂ ಕರಿಕೆ, ಚೆಂಬು, ಸಂಪಾಜೆ ಗ್ರಾಮೀಣ ಭಾಗಗಳನ್ನು ಕೇಂದ್ರ ಸರ್ಕಾರ ಸೂಕ್ಷ್ಮ ಪರಿಸರ ವಲಯಕ್ಕೆ ಒಳಪಡಿಸುವ ಮೂಲಕ ಗ್ರಾಮೀಣರ ಬದುಕಿಗೆ ಸಂಕಷ್ಟವನ್ನು ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಗೆ ಒಳಪಟ್ಟ ಗ್ರಾಮಗಳಲ್ಲಿನ ಹಲವು ಮಂದಿಗೆ ತಮ್ಮ ವಾಸದ ಜಾಗಕ್ಕೆ ಪಟ್ಟೆ ವಿತರಣೆ ಸಾಧ್ಯವಾಗುತ್ತಿಲ್ಲ, ಪಟ್ಟೆ ವಿತರಣೆ ಪ್ರಕ್ರಿಯೆಯ ಹಂತದ ಪ್ರಕರಣಗಳು ಕೂಡ ಇತ್ಯರ್ಥವಾಗದಂತಹ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎಲ್ಲಾ ಬೆಳವಣಿಗೆಗಳಿಗೆ ಸಂಸದ ಪ್ರತಾಪ ಸಿಂಹ ಹಾಗೂ ಜಿಲ್ಲೆಯ ಶಾಸಕದ್ವಯರ ನಿರ್ಲಕ್ಷ್ಯ ಧೋರಣೆಯೇ ಕಾರಣರೆಂದು ರಮಾನಾಥ್ ಆರೋಪಿಸಿದರು.

ತಾ. 12 ರಂದು ಪ್ರತಿಭಟನೆ

ಕೇಂದ್ರದ ನಿಲುವನ್ನು ಖಂಡಿಸಿ ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾ.12 ರಂದು ಭಾಗಮಂಡಲದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿ ರುವದಾಗಿ ತಿಳಿಸಿದ ಅವರು ಸೂಕ್ಷ್ಮ ಪರಿಸರ ವಲಯಕ್ಕೆ ಸಂಬಂಧಿಸಿದಂತೆ ರಚಿಸಿಕೊಂಡಿರುವ ರಾಜಕೀಯೇತರ ವೇದಿಕೆಯಿಂದ ವಿಚಾರಗಳು ಜನರಿಗೆ ತಿಳಿಯವದು ಅಸಾಧ್ಯವಾಗಿದೆ. ಆದ್ದರಿಂದ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಸೂಕ್ಷ್ಮ ಪರಿಸರ ವಲಯ ಘೋಷಣೆಯ ಸತ್ಯವನ್ನು ಜನರ ಮುಂದಿಡಲಿದೆ ಎಂದು ಸ್ಪಷ್ಟಪಡಿಸಿದರು.

ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಪತ್ರಾವೋ ಮಾತನಾಡಿ, ತಲಕಾವೇರಿ ವನ್ಯಧಾಮ ವ್ಯಾಪ್ತಿಯ ವಿವಿಧ ಗ್ರಾಮಗಳನ್ನು ಸೂಕ್ಷ್ಮ ಪರಿಸರ ವಲಯವನ್ನಾಗಿ ಘೋಷಣೆ ಮಾಡಿರುವದರಿಂದ ಬಿಜೆಪಿ ಮುಖಭಂಗಕ್ಕೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವೈಫಲ್ಯ ಕಾರಣವೆಂದು ಕಾರಣ ನೀಡಿ ತಾ.6 ರ ಭಾಗಮಂಡಲ ಗ್ರಾಮ ಸಭೆಯನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಆದರೆ, ಈ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿಗರೇ ಅಧಿಕಾರದಲ್ಲಿದ್ದಾರೆ ಎಂದು ಟೀಕಿಸಿದರು.

ಗ್ರಾಮ ಸಭೆÉಯಲ್ಲಿ ಜನಸಾಮಾನ್ಯರು ಪಾಲ್ಗೊಂಡು ಕಸ್ತೂರಿ ರಂಗನ್ ವರದಿಯ ಕುರಿತು ಚರ್ಚೆಗಳು ನಡೆಯಬೇಕಾಗಿದೆ. ಇದನ್ನು ತಡೆಹಿಡಿಯುವ ಷಡ್ಯಂತ್ರದ ಭಾಗವಾಗಿ ಬಿಜೆಪಿ ಯುವ ಮೋರ್ಚಾ ಗ್ರಾಮ ಸಭೆÉಯ ಬಹಿಷ್ಕಾರಕ್ಕೆ ಮುಂದಾಗಿದೆಯೆಂದು ಆರೋಪಿಸಿ ದರು. ಗ್ರಾಮ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ಸಂಚು ನಡೆಸಿದವರ ಬಣ್ಣವನ್ನು ಬಯಲು ಮಾಡಬೇಕೆಂದು ಸುನಿಲ್ ಪತ್ರಾವೋ ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಿಸಾನ್ ಘÀಟಕದ ಅಧ್ಯಕ್ಷ ಡಿ.ಎನ್. ಹರ್ಷ, ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರನಾಯರ್, ಚೆಟ್ಟಿಮಾನಿ ಗ್ರಾಪಂ ಸದಸ್ಯ ಹ್ಯಾರಿಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ರವೀಂದ್ರ ಕುಮಾರ್ ಉಪಸ್ಥಿತರಿದ್ದರು.