ಕೂಡಿಗೆ, ಜೂ. 7 : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಗ್ರಾಮದ ಅಯ್ಯಪ್ಪ ಸ್ವಾಮಿ ದೇಗುಲದ ಹಿಂಭಾಗದಲ್ಲಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂದಿಸಿದ್ದಾರೆ. ಇನ್ನುಳಿದ ನಾಲ್ವರು ಪರಾರಿಯಾಗಿದ್ದಾರೆ.
ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜೆ.ಇ.ಮಹೇಶ್ ನೇತೃತ್ವದ ತಂಡ ದಾಳಿ ನಡೆಸಿದ ಸಂದರ್ಭ ಜೂಜಾಡುತ್ತಿದ್ದ ಆರು ಜನರಲ್ಲಿ ಇಬ್ಬರನ್ನು ಸೇರಿದಂತೆ ಪಣಕ್ಕಿರಿಸಿದ್ದ 15,000 ರೂ ಹಣ ಮತ್ತು ಅವರುಗಳು ನಿಲ್ಲಿಸಿದ್ದ ಎರಡು ಮೋಟಾರ್ ಸೈಕಲ್‍ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.