ಕೂಡಿಗೆ, ಜೂ. 7: ಅಪ್ರಾಪ್ತ ಬಾಲಕಿಯನ್ನು ಅದೇ ಗ್ರಾಮದ ಯುವಕ ಅಪಹರಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ಕುಟುಂಬದವರು ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಜೆ.ಇ.ಮಹೇಶ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಣಿವೆ ಗ್ರಾಮದ ರವಿ ಕಳೆದ ಮೂರು ತಿಂಗಳ ಹಿಂದೆ ಅದೇ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ತಲೆ ಮರೆಸಿಕೊಂಡಿದ್ದ. ಬಾಲಕಿ ಅಪಹರಣವಾದ ನಂತರ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಖಚಿತ ಸುಳಿವಿನ ಮೇರೆಗೆ ಸುಂಟಿಕೊಪ್ಪದ ತೋಟವೊಂದರ ಲೈನ್ ಮನೆಯಲ್ಲಿ ಇದ್ದುದ್ದನ್ನು ಗುರುತಿಸಿ ಆರೋಪಿ ಯನ್ನು ಬಂಧಿಸಿ, ಪ್ರಕರಣ ದಾಖಲಿಸಿ ರುವ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.