ಸೋಮವಾರಪೇಟೆ, ಜೂ.7 : ಕನ್ನಡ ಸಾಹಿತ್ಯ ಮತ್ತು ಜಾನಪದದ ಜೀವಂತಿಕೆಗೆ ಇಲ್ಲಿನ ಕಲಾವಿದರೆ ಜೀವಾಳವಾಗಿದ್ದು, ಇಂತಹ ಕಲೆಗಳನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕ ಹಾಗೂ ಯಕ್ಷಗಾನ ಕಲಾವಿದ ಸುಬ್ರಾಯ ಸಂಪಾಜೆ ಅಭಿಪ್ರಾಯಿಸಿದರು.

ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲೂಕು ಕಸಾಪ ವತಿಯಿಂದ ಆಯೋಜಿಸಲಾಗಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಲೆ, ಸಾಹಿತ್ಯ, ಸಂಸ್ಕøತಿಯ ಮೂಲಕ ಕನ್ನಡ ನಾಡನ್ನು ಸುಭದ್ರವಾಗಿ ಕಟ್ಟುವ ಕೆಲಸ ಪ್ರತಿಯೋರ್ವ ಕನ್ನಡಿಗರಿಂದ ಆಗಬೇಕು ಎಂದ ಅವರು, ಇಲ್ಲಿನ ಜಾನಪದ ಕಲೆಗಳನ್ನು ಗೌರವಿಸುವ ಹಾಗು ಆರಾಧಿಸುವವರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಆಧುನಿಕ, ಪಾಶ್ಚಾತ್ಯ ಶೈಲಿಯ ನೃತ್ಯ ಹಾಗು ಹಾಡುಗಳ ನಡುವೆಯೂ ಈ ಮಣ್ಣಿನ ಭರತನಾಟ್ಯ, ಯಕ್ಷಗಾನದಂತಹ ಕಲೆಗಳು ತನ್ನತನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಜಾನಪದ ಕಲಾವಿದ ಬೆಸೂರು ಶಾಂತೇಶ್, ಆಕಾಶವಾಣಿ ಕಲಾವಿದ ಬಿ.ಎ.ಗಣೇಶ್ ಮತ್ತು ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಕೆ.ಎನ್.ದೀಪಕ್ ಉಪಸ್ಥಿತರಿದ್ದರು.

ತಾಲೂಕಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗು ಸಂಘಸಂಸ್ಥೆಗಳ ಪದಾಧಿಕಾರಿಗಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.