ಸೋಮವಾರಪೇಟೆ, ಜೂ. 8: ಐಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸದಸ್ಯ ಡಿ.ಎಸ್. ಚಂಗಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದುವರೆಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಕೆ.ಪಿ. ರಾಯ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ; ತೆರವಾಗಿದ್ದ ಸ್ಥಾನಕ್ಕೆ ಗ್ರಾ.ಪಂ. ಸಭಾಂಗಣದಲ್ಲಿ ತಾಲೂಕು ತಹಶೀಲ್ದಾರ್ ಕೃಷ್ಣ ಅವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಚಂಗಪ್ಪ ಅವರೋರ್ವರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾ ಪ್ರಕ್ರಿಯೆಯಲ್ಲಿ ಸದಸ್ಯರುಗಳಾದ ಕೆ.ಪಿ. ರಾಯ್, ಶೋಭ, ಮಂಜುಳಾ, ಕುಮಾರಿ, ರಮೇಶ್, ಗೋಪಾಲಕೃಷ್ಣ, ಪಾಂಚಾಲಿ, ಮಹೇಶ್ವರಿ, ಸವಿತಾ ಅವರುಗಳು ಭಾಗವಹಿಸಿದ್ದರು.