ಮಡಿಕೇರಿ, ಜೂ.8: ಮಧ್ಯಪ್ರದೇಶದ ಮಂಡಸೌರ್ ಕ್ಷೇತ್ರದ ಮಾಜಿ ಸಂಸದರು ಹಾಗೂ ಕಾಂಗ್ರೆಸ್‍ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷೆ ಮೀನಾಕ್ಷಿ ನಟರಾಜನ್ ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿರುವ ಸಂಘಟನೆಯ ಕೊಡಗು ಜಿಲ್ಲಾ ಸಮಿತಿ ಮಧ್ಯಪ್ರದೇಶ ಸರಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಜಿಲ್ಲಾ ಸಂಯೋಜಕ ರಾದ ತೆನ್ನಿರಾ ಮೈನಾ ಮಧ್ಯಪ್ರದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ ರೀತಿಯಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಸಂದರ್ಭ ನಗರ ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಡಿಸಿಸಿ ಸದಸ್ಯ ಸದಾನಂದ ಬಂಗೇರ, ನಗರ ಕಾಂಗ್ರೆಸ್ ಮುಖಂಡ ಚಿಮ್ಮ ಪೂಣಚ್ಚ ಮತ್ತಿತರರು ಹಾಜರಿದ್ದರು.