ಮಡಿಕೇರಿ, ಜೂ. 8: ಮಡಿಕೇರಿ ತಾಲೂಕು 8ನೇ ಸಾಹಿತ್ಯ ಸಮ್ಮೇಳನ ಸಂಬಂಧ ಪೂರ್ವಭಾವಿ ಸಭೆ ಜಿಲ್ಲಾ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆಯಿತು. ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಸಮಿತಿಗಳ ಸಂಚಾಲಕರು, ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಆಯೋಜನೆ ಸಂಬಂಧ ಆಗಿರುವ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.ಖರ್ಚುವೆಚ್ಚ ಪಟ್ಟಿ ಸಿದ್ಧಪಡಿಸುವ ಸಲುವಾಗಿ ಎಲ್ಲಾ ಉಪ ಸಮಿತಿಗಳ ಸಭೆಯನ್ನು ತಾ. 10 ರಂದು ಶಾಸಕರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಲಾಯಿತು. ಅಂದು ಮಧ್ಯಾಹ್ನ 2.30ಕ್ಕೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸಭೆ ನಡೆಯಲಿದೆ. ಇದಕ್ಕೂ ಮುನ್ನ 1.30ಕ್ಕೆ ಸಮ್ಮೇಳನಾಧ್ಯಕ್ಷ ಬಿ.ಎ. ಷಂಶುದ್ದೀನ್ ಅವರನ್ನು ಸಾಂಪ್ರದಾಯಿಕವಾಗಿ ಆಹ್ವಾನಿಸಲು ನಿರ್ಧರಿಸಲಾಯಿತು.

ತಾಲೂಕು ಕೋಶಾಧಿಕಾರಿ ಬಾಳೆಕಜೆ ಯೋಗೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಸಿ. ದಯಾನಂದ, ಕಾರ್ಯದರ್ಶಿ ಬಾಳೆಯಡ ಕಿಶನ್ ಪೂವಯ್ಯ, ಜಿಲ್ಲಾ ಕಾರ್ಯದರ್ಶಿ ಕೆ.ಎಸ್. ರಮೇಶ್, ಉಪ ಸಮಿತಿಗಳ ಸಂಚಾಲಕರಾದ ಭಾರತಿ ರಮೇಶ್, ಕೋಡಿ ಚಂದ್ರಶೇಖರ್, ಪಿ.ಎಂ. ರವಿ, ಅಂಬೆಕಲ್ ನವೀನ್ ಮುಂತಾದವರಿದ್ದರು.