ಮಡಿಕೇರಿ, ಜೂ. 9: ಕುಶಾಲನಗರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಗ್ರಾಹಕರ ಸಭೆಯನ್ನು ತಾ. 13ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಗುವದು.

ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ಸೆಸ್ಕ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಕೋರಿದ್ದಾರೆ.