ಶ್ರೀಮಂಗಲ, ಜೂ. 9: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಆಯುಷ್ ಇಲಾಖೆ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ಉಚಿತ ಯೋಗ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿ ಮಾತನಾಡಿದ ಟಿ. ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಮಚ್ಚಮಾಡ ಸುಮಂತ್, ಯೋಗಭ್ಯಾಸದಿಂದ ಸಿಗುವ ಆರೋಗ್ಯ ಬೇರೆ ಯಾವದರಿಂದಲೂ ಸಿಗಲು ಸಾಧ್ಯವಿಲ್ಲ. ಸಣ್ಣ ಮಕ್ಕಳು ಸೇರಿದಂತೆ ವಯೋವೃದ್ಧರೂ ಕೂಡ ಯೋಗಭ್ಯಾಸದಿಂದ ಬದುಕಿನಲ್ಲಿ ಸ್ವಾಸ್ಥ್ಯ ಕಾಯ್ದುಕೊಳ್ಳಬಹುದು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಆರ್ಟ್ ಆಫ್ ಲಿವಿಂಗ್‍ನ ಜಿಲ್ಲಾ ಕಾರ್ಯಕರ್ತ ಬೊಟ್ಟಂಗಡ ಎಂ. ರಾಜು ಮಾತನಾಡಿ, ಯೋಗವು ಮಾನಸಿಕ ಹಾಗೂ ದೈಹಿಕ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ ಎಂದರು.
ಈ ಸಂದರ್ಭ ಟಿ. ಶೆಟ್ಟಿಗೇರಿ ಗ್ರಾ.ಪಂ. ಸದಸ್ಯ ಮುಕ್ಕಾಟಿರ ಸಂದೀಪ್, ಆರ್ಟ್ ಆಫ್ ಲಿವಿಂಗ್‍ನ ಯೋಗ ಶಿಕ್ಷಕಿ ಕಾಳಿಮಾಡ ಶಾಂಭವಿ, ಶ್ರೀಮಂಗಲ ಆಯುಷ್ ಆಸ್ಪತ್ರೆಯ ವೈದ್ಯ ಡಾ. ವಿಶ್ವ ತಿಲಕ್ ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.