ಮಡಿಕೇರಿ, ಜೂ. 9: ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ವ್ಯಾಪ್ತಿಯಲ್ಲಿನ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಖಾಲಿ ಇರುವ ಸ್ಥಾನಗಳಿಗೆ ಮಾಹೆಯಾನ ರೂ. 7 ಸಾವಿರ ಗೌರವ ಸಂಭಾವನೆ ಆಧಾರದ ಮೇಲೆ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಹುದ್ದೆಗಳಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಹುದ್ದೆಗಳ ಮೀಸಲಾತಿ ವಿವರ ಇಂತಿದೆ. ವೀರಾಜಪೇಟೆ ತಾಲೂಕಿನ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಗ್ರಂಥಾಲಯ 2ಎ (ಗ್ರಾಮೀಣ ಅಭ್ಯರ್ಥಿ), ಮಡಿಕೇರಿ ತಾಲೂಕಿನ ನರಿಯಂದಡ (ಕರಡ) ಗ್ರಾಮ ಪಂಚಾಯಿತಿ ಸಾಮಾನ್ಯ ಅಭ್ಯರ್ಥಿ, (ಯೋಜನೆ ನಿರಾಶ್ರಿತ ಅಭ್ಯರ್ಥಿ).
ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನ. ಹುದ್ದೆಗೆ ನಿಗದಿಪಡಿಸಿದ ಗ್ರಾ.ಪಂ. ವ್ಯಾಪ್ತಿಯವರಾಗಿದ್ದು ಹಾಗೂ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ವಿದ್ಯಾರ್ಹತೆಯ ಹಾಗೂ ಇತರೆ ದಾಖಲೆಗಳನ್ನು ದೃಢೀಕರಿಸಿದ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ, ಅರ್ಜಿಯನ್ನು ಸಂಬಂಧಪಟ್ಟ ಗ್ರಾ.ಪಂ. ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಮುಖ್ಯ ಗ್ರಂಥಾಲಯಾಧಿಕಾರಿಯವರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ದೂ.ಸಂ: 08272-225463 ಅಥವಾ ಈ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.