ಸಿದ್ದಾಪುರ, ಜೂ. 9: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಿದ್ದಾಪುರ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ವಿಶೇಷ ದಾಖಲಾತಿ ಆಂದೋಲನ ನಡೆಸಿದರು.
ಈ ಸಂದರ್ಭ ಗ್ರಾಮ ಪಂಚಾಯತಿ ಅಧ್ಯಕ್ಷ ಎಂ.ಕೆ. ಮಣಿ, ಸದಸ್ಯರುಗಳಾದ ಶೌಕತ್ ಅಲಿ, ಶೂಕೂರ್, ಜಾಫರ್, ದೇವಜಾನು, ಪೂವಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್, ಸಿದ್ದಾಪುರ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರೇಮಾ ಕುಮಾರಿ, ಸಿ.ಆರ್.ಪಿ. ರಶ್ಮಿ, ಗುಯ್ಯ ಶಾಲಾ ಶಿಕ್ಷಕ ಮಣಿಕಂಠ, ಕರಡಿಗೋಡು ಶಾಲಾ ಶಿಕ್ಷಕ, ದೇವರಾಜ್, ಮಲಯಾಳಂ ಶಾಲೆ ಮುಖ್ಯ ಶಿಕ್ಷಕಿ ಶೀಸಿ, ಅಂಗನವಾಡಿ ಕಾರ್ಯಕರ್ತೆ ವಾಹೀದ, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಆಂದೋಲನ ಸಭೆ
ಸಾರ್ವಜನಿಕ ಶಿಕ್ಷಣ ಇಲಾಖೆ, ಸಿದ್ದಾಪುರ ಶಾಲಾ ಆಡಳಿತ ಮಂಡಳಿ ಮತ್ತು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿಶೇಷ ದಾಖಲಾತಿ ಆಂದೋಲನ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ. ಮಣಿ ಅಧ್ಯಕ್ಷತೆಯಲ್ಲಿ ನಡೆಯಿತು.
ಸಿ.ಆರ್.ಪಿ. ರಶ್ಮಿ ಸಭೆಯಲ್ಲಿ ಮಾಹಿತಿ ನೀಡಿ ಶಾಲಾ ವಿದ್ಯಾರ್ಥಿಗಳಿಗೆ 6 ರಿಂದ 14 ವರ್ಷದ ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದರೆ ಮತ್ತೆ ಶಾಲೆಗೆ ಸೇರಿಸಲು ಈ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.