ಮಡಿಕೇರಿ, ಜೂ. 10: ಜಿಲ್ಲೆಯಲ್ಲಿ ಅತಿಸಾರ ಭೇದಿಯ ತೀವ್ರ ನಿಯಂತ್ರಣಾ ಪಾಕ್ಷಿಕ 2017 ಕಾರ್ಯಕ್ರಮವನ್ನು ತಾ. 12 ರಿಂದ 24 ರವರೆಗೆ ಹಮ್ಮಿಕೊಳ್ಳಲಾಗಿದೆ. ಅತಿಸಾರ ಭೇದಿಯ ತೀವ್ರ ನಿಯಂತ್ರಣಾ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನೆ ತಾ. 12 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಅಜಾದ್ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.