ಮಡಿಕೇರಿ, ಜೂ. 10: ತಾ. 17 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿರುವ ಮಡಿಕೇರಿ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಕೋಟೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಬಿಡುಗಡೆ ಮಾಡಿದರು. ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಸಮ್ಮೇಳನದ ಗೌರವ ಅಧ್ಯಕ್ಷ ಹಾಗೂ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್, 8ನೇ ಕನ್ನಡ ಸಾಹಿತ್ಯ ಮಡಿಕೇರಿ ತಾಲೂಕು 8ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಬಿ.ಎ. ಷಂಶುದ್ದಿನ್ ಅವರನ್ನು ಕಸಾಪ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಆತ್ಮೀಯವಾಗಿ ಸನ್ಮಾನಿಸಿ ಸಮ್ಮೇಳನಕ್ಕೆ ಆಹ್ವಾನ ನೀಡಿದರು.

ಈ ಸಂದರ್ಭ ಮಾತನಾಡಿದ ಸಾಹಿತಿ ಬಿ.ಎ. ಷಂಶುದ್ದಿನ್, ಕನ್ನಡದ ಕೆಲಸಕ್ಕೆ ತಾವೂ ಸದಾ ಮುಂದಿರುತ್ತೇವೆ. ಕಳೆದೆರಡು ವರ್ಷಗಳಿಂದ ಅನ್ಯಕಾರ್ಯ ನಿಮಿತ್ತ ಕನ್ನಡದ ಕೆಲಸದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮುಂದಿನ ದಿನದಲ್ಲಿ ಕನ್ನಡ ಕೆಲಸಕ್ಕೆ ಸಹಕಾರ ನೀಡುದಾಗಿ ಹೇಳಿದ ಅವರು ತಮ್ಮನ್ನು ಸಮ್ಮೇಳನದ ಅಧ್ಯಕ್ಷರಾಗಿ

(ಮೊದಲ ಪುಟದಿಂದ) ನಿಟ್ಟಿನಲ್ಲಿ ಸರ್ವರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್ ಲೋಕೇಶ್ ಸಾಗರ್, ಸಾಹಿತ್ಯ ಸಮ್ಮೇಳನವನ್ನು ಆಚರಿಸುವ ನಿಟ್ಟಿನಲ್ಲಿ ಪ್ರಥಮ ಹೆಜ್ಜೆ ಇಡಲಾಗಿದೆ. ಈಗಾಗಲೇ ಜಿಲ್ಲಾ ಸಮ್ಮೇಳನ ಹಾಗೂ ತಾಲೂಕು ಸಮ್ಮೇಳನ ಅತ್ಯಂತ ಯಶ ಕಂಡಿದ್ದು, ಮಡಿಕೇರಿ ತಾಲೂಕು ಸಮ್ಮೇಳನ ಕೂಡ ಯಶಸ್ಸು ಕಾಣುವ ಭರವಸೆ ಇದೆ ಎಂದರು.

ಶಾಸಕ ಎಂ.ಪಿ. ಅಪ್ಪಚ್ಚು ಗೌರವ ಅಧ್ಯಕ್ಷರಾಗಿರುವದು ಸಂತಸ ತಂದಿದ್ದು, ನಮ್ಮ ಪ್ರತಿ ಕಾರ್ಯಕ್ರಮಕ್ಕೂ ಶಾಸಕರು ಕೈ ಜೋಡಿಸುತ್ತಾರೆ ಎಂದು ತಿಳಿಸಿದರು. ಇದೇ ಸಂದರ್ಭ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ರೂಪಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಪೂರ್ವಭಾವಿ ಸಭೆ: ನಂತರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು ಸಮ್ಮೇಳನದ ಯಶಸ್ಸಿಗೆ ಕನ್ನಡಾಭಿಮಾನಿಗಳ ಸಹಕಾರ ಅತ್ಯಗತ್ಯ. ಸಮ್ಮೇಳನದಲ್ಲಿ ಮೆರವಣಿಗೆ, ಅಲಂಕಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳ ಸಿದ್ಧತೆ ಬಗ್ಗೆ ಚರ್ಚೆ ಮಾಡಿದರು.

ಸಾಂಸ್ಕøತಿಕ ಸಮಿತಿ ಅಧ್ಯಕ್ಷೆ ಭಾರತಿ ರಮೇಶ್ ಸಮ್ಮೇಳನದಲ್ಲಿ ಸಾಂಸ್ಕøತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಸಿದ್ಧತೆ ನಡೆಸಲಾಗುತ್ತಿದೆ. ವಿವಿಧ ಶಾಲೆಗಳಿಗೆ ಭೇಟಿ ನೀಡಿ ಕಾರ್ಯಕ್ರಮ ನೀಡುವ ಬಗ್ಗೆ ಮನವಿ ಮಾಡಲಾಗಿದೆ. ಕಾರ್ಯಕ್ರಮ ನೀಡುವ ಕಲಾವಿದರಿಗೆ ಊಟದ ವೆಚ್ಚ, ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದ್ದು, ಯಾವದೇ ಕೊರತೆಯಾಗದಂತೆ ಕಾರ್ಯಕ್ರಮ ನಡೆಸಲಾಗುವದು ಎಂದು ಮಾಹಿತಿ ನೀಡಿದರು.

ಮೆರವಣಿಗೆ ಸಮಿತಿಯ ಮಂಡುವಂಡ ಬಿ. ಜೋಯಪ್ಪ ಮಾತನಾಡಿ, ಮೆರವಣಿಗೆ ನಗರದ ಕೋಟೆ ಆವರಣದಿಂದ ಹೊರಟು ಬಸ್ ನಿಲ್ದಾಣಕ್ಕಾಗಿ, ಇಂದಿರಾಗಾಂಧಿ ವೃತ್ತದಿಂದ ಹಿಂದಿರುಗಿ ಜ. ತಿಮ್ಮಯ್ಯ ವೃತ್ತಕ್ಕಾಗಿ ಕಾವೇರಿ ಕಲಾಕ್ಷೇತ್ರಕ್ಕೆ ಆಗಮಿಸುವಂತೆ ತೀರ್ಮಾನಿಸಲಾಗಿದೆ. ಮಳೆ ಬಂದರೆ ಹೆಚ್ಚು ದೂರದ ಮೆರವಣಿಗೆಗೆ ಅಡ್ಡಿಯಾಗಬಹುದು ಎಂದು ಸಭೆಯ ಗಮನಕ್ಕೆ ತಂದರು. ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಎರಡು ತಂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದರೊಂದಿಗೆ ಕೊಡಗಿನ ವಾದ್ಯ, ಕಂಗೀಲು ನೃತ್ಯ, ಮರಗೋಡಿನ ಕಲಾತಂಡ ಹಾಗೂ ಆಟೋ ಚಾಲಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಮ್ಮೇಳನದ ಸಂದರ್ಭ ನಗರದಾದ್ಯಂತ ಸುಮಾರು 1,250 ಧ್ವಜಗಳನ್ನು ಬಳಸಿ ಪ್ರತಿಯೊಬ್ಬರಲ್ಲೂ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂಬ ಅಭಿಪ್ರಾಯ ವ್ಯಕ್ತ ಪಡಿಸಲಾಯಿತು.

ಆಹಾರ ಸಮಿತಿ ಸಂಚಾಲಕ ಪಿ.ಎಂ. ರವಿ ಸಮ್ಮೇಳನಕ್ಕೆ ಆಗಿಮಿಸುವ ಸವ ಕನ್ನಡಾಭಿನಿಗಳಿಗೆ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ವೇದಿಕೆ ಸಮಿತಿಯ ಕೋಡಿ ಚಂದ್ರಶೇಖರ್ ವೇದಿಕೆಯ ಸಿದ್ಧತೆ ಬಗ್ಗೆ ಮಾಹಿತಿ ಒದಿಗಿಸಿದರು.

ಉಳಿದಂತೆ ಪ್ರಚಾರ ಸಮಿತಿ, ಹಣಕಾಸು ಸಮಿತಿ, ಆರೋಗ್ಯ ನೈರ್ಮಲ್ಯ ಸಮಿತಿ, ಶಿಸ್ತು ಸಮಿತಿ, ಸೇರಿದಂತೆ ಎಲ್ಲಾ ಸಮಿತಿಯ ಕಾರ್ಯಗಳ ಬಗ್ಗೆ ಶಾಸಕರು ಮಾಹಿತಿ ಪಡೆದರು. ಇದೇ ಸಂದರ್ಭ ಸಮ್ಮೇಳನ ಖರ್ಚು-ವೆಚ್ಚದ ಅಂದಾಜು ಪಟ್ಟಿ ತಯಾರಿಸಲಾಯಿತು.

ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಮೂಡ ಅಧ್ಯಕ್ಷ ಚುಮ್ಮಿ ದೇವಯ್ಯ, ತಾಲೂಕು ಕಾರ್ಯದರ್ಶಿ ದಯಾನಂದ, ಉಪ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.\