ಮಡಿಕೇರಿ, ಜೂ.13 : ಜಮೀನು, ನಿವೇಶನ ರಹಿತರಾಗಿದ್ದು, ಕೊಡಗು ಜಿಲ್ಲೆಯಲ್ಲಿ ಲೈನ್‍ಮನೆಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದವರು ವಸತಿ ನಿವೇಶನಕ್ಕಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಚೇರಿ, ಪೊನ್ನಂಪೇಟೆ, ವೀರಾಜಪೇಟೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿಯ ಜೊತೆಗೆ ಕಡ್ಡಾಯವಾಗಿ ಲೈನ್‍ಮನೆಗಳಲ್ಲಿ ವಾಸಿಸುತ್ತಿರುವ ಬಗ್ಗೆ ವಾಸ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳಾದ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳಲ್ಲಿ ಯಾವದಾದರೊಂದು ದಾಖಲಾತಿಯನ್ನು ಸಲ್ಲಿಸುವದು. ಅರ್ಜಿದಾರರ ಹೆಸರು, ವಿಳಾಸ, ವಯಸ್ಸು, ವಿವಾಹಿತರೇ ಅಥವಾ ಅವಿವಾಹಿತರೇ ಎಂಬ ಬಗ್ಗೆ ಮತ್ತು ವಾಸವಿರುವ ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಹೆಸರನ್ನು ಕಡ್ಡಾಯವಾಗಿ ನಮೂದಿಸುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ.