ಮಡಿಕೇರಿ, ಜೂ. 13 ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಿಗೆ ಮಾರಕವಾಗಬಹುದಾದ ಸೂಕ್ಷ್ಮ ಪರಿಸರ ವಲಯ ಘೋಷಣೆಯ ಪ್ರಸ್ತಾಪದ ವಿರುದ್ಧ ರಾಜಕೀಯ ಪಕ್ಷಗಳು ಪಕ್ಷಾತೀತ ಹಾಗೂ ಜಾತ್ಯತೀತ ನೆಲೆಗಟ್ಟಿನಲ್ಲಿ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕೆ ಹೊರತು ಆರೋಪ, ಪ್ರತ್ಯಾರೋಪಗಳ ಮೂಲಕ ಜವಾಬ್ದಾರಿಗಳಿಂದ ನುಣುಚಿಕೊಳ್ಳುವದು ಸರಿಯಾದ ಕ್ರಮವಲ್ಲವೆಂದು ಪೀಪಲ್ಸ್ ಮೂವ್‍ಮೆಂಟ್ ಫಾರ್ ಹ್ಯೂಮನ್ ರೈಟ್ಸ್‍ನ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಅಭಿಪ್ರಾಯಪಟ್ಟಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಸೂಕ್ಷ್ಮ ಪರಿಸರ ವಲಯ ಘೋಷಣೆಯ ವಿರುದ್ಧ ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಹೋರಾಟಗಳಿಗೆ ತಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ. ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಾನವ ಹಕ್ಕುಗಳಿಗೆ ಚ್ಯುತಿ ಉಂಟಾಗುವ ಯೋಜನೆಗಳು ಜಾರಿಯಾಗುವ ಹಂತದಲ್ಲಿ ಜಿಲ್ಲೆಯ ಜನ ರಾಜಕೀಯ ಮರೆತು ಒಂದಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದಿದ್ದಾರೆ.