ಮಡಿಕೇರಿ, ಜೂ. 15 : 10ನೇ ತರಗತಿ ಪರೀಕ್ಷೆಯಲ್ಲಿ ಮಕ್ಕಂದೂರು ಸರಕಾರಿ ಪ್ರೌಢಶಾಲೆ ಶೇ. 100ರಷ್ಟು ಫಲಿತಾಂಶ ಗಳಿಸಿದ್ದು, ಈ ಸಾಧನೆಗೆ ಕಾರಣಕರ್ತರಾದ ಶಾಲೆಯ ಶಿಕ್ಷಕರುಗಳನ್ನು ತಾ. 16ರಂದು (ಇಂದು) ದಲಿತ ಸಂಘರ್ಷ ಸಮಿತಿಯ ವತಿಯಿಂದ ಸನ್ಮಾನಿಸಲಾಗುವದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.

ಶಾಲಾ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮ ವನ್ನು ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ದೇವದಾಸ್ ಉದ್ಘಾಟಸಲಿದ್ದು, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಹಾಗೂ ಗಾಳಿಬೀಡಿನ ದಾನಿ ಟಿ.ಎಸ್. ವಾಸುದೇವ್ ಶಿಕ್ಷಕರುಗಳನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವೃತ್ತ ನಿರೀಕ್ಷಕ ಬಿ.ಆರ್. ಪ್ರದೀಪ್ ಮಾತನಾಡಲಿದ್ದು, ಮುಖ್ಯ ಅತಿಥಿಗಳಾಗಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಎ. ರವಿ, ತಾಲೂಕು ಸಂಚಾಲಕ ಹೆಚ್.ಎಲ್. ಕುಮಾರ್, ತಾಲೂಕು ಸಂಘಟನಾ ಸಂಚಾಲಕ ಎ.ಪಿ. ದೀಪಕ್ ಪಾಲ್ಗೊಳ್ಳಲಿದ್ದಾರೆ.