ಮಡಿಕೇರಿ, ಜೂ. 15: ಸರ್ಕಾರದ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ‘ಡಿ’ ವೃಂದದ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ.

ತಾ. 22 ರಂದು ಬೆಳಿಗ್ಗೆ 9.30 ಗಂಟೆಯಿಂದ ಅಡುಗೆಯವರ ಹುದ್ದೆಗೆ ದಾಖಲಾತಿ ಪರಿಶೀಲನೆ ಕಾರ್ಯ ನಡೆಯಲಿದೆ. ತಾ. 23 ರಂದು ಬೆಳಿಗ್ಗೆ 9.30 ಗಂಟೆಯಿಂದ ಅಡುಗೆ ಸಹಾಯಕರ ಹುದ್ದೆಗೆ ದಾಖಲಾತಿ ಪರಿಶೀಲನೆ, ತಾ. 28 ರಂದು ಬೆಳಿಗ್ಗೆ 9 ಗಂಟೆಯಿಂದ ಅಡುಗೆಯವರ ಹುದ್ದೆಗೆ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆ ಮತ್ತು ತಾ. 29 ರಂದು ಬೆಳಿಗ್ಗೆ 9 ಗಂಟೆಯಿಂದ ಅಡುಗೆ ಸಹಾಯಕರ ಹುದ್ದೆಗೆ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಜುಲೈ 3 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಜುಲೈ 18 ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದಂತೆ ಸರ್ಕಾರ 1:5 ರ ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ನಡೆಸಲು ನಿರ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳು ತಿತಿತಿ.ಞoಜಚಿgu.ಟಿiಛಿ.iಟಿ ನ ವೆಬ್‍ಸೈಟ್‍ನಲ್ಲಿ ದಾಖಲಾತಿ ಪರಿಶೀಲನೆಗೆ ಕಾಲ್‍ಲೆಟರ್ ಅನ್ನು ಡೌನ್‍ಲೋಡ್ ಮಾಡಿಕೊಂಡು ಕಾಲ್‍ಲೆಟರ್‍ನಲ್ಲಿ ತಿಳಿಸಿರುವಂತೆ ಅಗತ್ಯ ದಾಖಲಾತಿಗಳೊಂದಿಗೆ ದಾಖಲಾತಿ ಪರಿಶೀಲನೆಗೆ ಡಿ. ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇಲ್ಲಿಗೆ ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:08272-225628 ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ.