ಮಡಿಕೇರಿ ಜೂ.15 : ಮಡಿಕೇರಿ ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಜಿನ ನಗರಿ ಸಜ್ಜಾಗಿದ್ದು, ತಾ. 17 ರಂದು (ನಾಳೆ) ಸಮ್ಮೇಳನಾಧ್ಯಕ್ಷ ಬಿ.ಎ. ಷಂಶುದ್ದೀನ್ ಅವರ ಸರ್ವಾಧ್ಯಕ್ಷತೆಯಲ್ಲಿ ಕನ್ನಡಪರವಾದ ವಿವಿಧ ಕಾರ್ಯಕ್ರಮಗಳು ಜರುಗಲಿವೆ.ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿಯನ್ನು ಸಮ್ಮೇಳನದಲ್ಲಿ ಪ್ರತಿಬಿಂಬಿಸಲಾಗುವದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ.17 ರಂದು ನಗರದಲ್ಲಿ ನಡೆಯುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯುವ ಸಮ್ಮೇಳನವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಸಮ್ಮೇಳನಾಧ್ಯಕ್ಷ ಬಿ.ಎ. ಷಂಶುದ್ದೀನ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ.ಹರೀಶ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಪ್ರಾಸ್ತಾವಿಕ ನುಡಿಯಾಡಲಿದ್ದಾರೆ. ನಿಕಟಪÀÇರ್ವ ಅಧ್ಯಕ್ಷ ಡಾ. ಶ್ರೀಧರ ಹೆಗಡೆ ಮಾತನಾಡಲಿದ್ದಾರೆ.

ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕಸಾಪ ನಿಕಟಪÀÇರ್ವ ಅಧ್ಯಕ್ಷÀ ಟಿ.ಪಿ. ರಮೇಶ್, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಉದ್ಯಮಿ ನಾಪಂಡ ಮುತ್ತಪ್ಪ, ಮತ್ತಿತರ ಪ್ರಮುಖರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

ಇದಕ್ಕೂ ಮೊದಲು ನಡೆಯುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಕೋಟೆ ಆವರಣದ ಕಸಾಪ ಕಚೇರಿಯ ಬಳಿಯಲ್ಲಿ ಉದ್ಘಾಟಿಸಲಿದ್ದಾರೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಂಡು ನಗರದ ಮುಖ್ಯ ಬೀದಿಗಳಲ್ಲಿ ಸಾಗಲಿದೆ. ಒಂದು ವೇಳೆ ಮಳೆÉ ಬಂದಲ್ಲಿ ಮೆರವಣಿಗೆಯನ್ನು ಮೊಟಕು ಗೊಳಿಸುವದಾಗಿ ತಿಳಿಸಿದರು.

(ಮೊದಲ ಪುಟದಿಂದ) ರಾಷ್ಟ್ರಧ್ವಜವನ್ನು ಬೆಳಗ್ಗೆ 8 ಗಂಟೆÉಗೆ ನಗರಸಭೆ ಪೌರಾಯುಕ್ತೆ ಬಿ. ಶುಭ ಹಾಗೂ ನಾಡ ಧ್ವಜವನ್ನು ಕಸಾಪ ಅಧ್ಯಕ್ಷ ಲೋಕೇಶ್ ಸಾಗರ್ ಆರೋಹಣ ಮಾಡಲಿದ್ದಾರೆ. ಬಿ.ಎಸ್. ಗೋಪಾಲಕೃಷ್ಣ ಮಹಾದ್ವಾರವನ್ನು ನಗರಸಭೆ ಉಪಾಧ್ಯಕ್ಷ ಟಿ.ಎಸ್.ಪ್ರಕಾಶ್ ಉದ್ಘಾಟಿಸಲಿದ್ದಾರೆ. ಕಾವೇರಿ ಕಲಾ ಕ್ಷೇತ್ರದ ಆವರಣದಲ್ಲಿ ಭಾರತೀಸುತ ಪÀÅಸ್ತಕ ಮಳಿಗೆಯನ್ನು ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಉದ್ಘಾಟಿಸಲಿದ್ದಾರೆ. ಎದುರ್ಕಳ ಶಂಕರನಾರಾಯಣ ಭಟ್ ಸಭಾಂಗಣವನ್ನು ಮೂಡ ಅಧ್ಯಕ್ಷ ಎ.ಸಿ. ಚುಮ್ಮಿ ದೇವಯ್ಯ, ಅಂಬಳೆ ಸುಬ್ಬರಾವ್ ವೇದಿಕೆಯನ್ನು ನಗರಸಭೆ ಅಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ ಉದ್ಘಾಟಿಸಲಿದ್ದಾರೆ.

ಕೊಡಗು ಜಿಲ್ಲಾ ಮಹಿಳಾ ಲೇಖಕಿಯರ ಬಳಗದ ಅಧ್ಯಕ್ಷೆ ಕಸ್ತೂರಿ ಗೋವಿಂದಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಗೋಷ್ಠಿಯಲ್ಲಿ ‘ಕನ್ನಡ ಸಾಹಿತ್ಯದ ಮೇಲೆ ಸಾಮಾಜಿಕ ಜಾಲ ತಾಣಗಳ ಪ್ರಭಾವ’ ವಿಷಯದ ಕುರಿತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಉಪನ್ಯಾಸಕÀ ಎಂ.ಕೆ. ಮಾಧವ ಉಪನ್ಯಾಸ ನೀಡಲಿದ್ದಾರೆ. ‘ಕೊಡಗಿನಲ್ಲು ಪ್ರಾಕೃತಿಕ ಅಸಮತೋಲನ. ಕಾರಣ ಮತ್ತು ಪರಿಹಾರ’ ವಿಷಯದ ಕುರಿತು ಹಿರಿಯ ಸಾಹಿತಿ ಬಿ.ಆರ್. ಜೋಯಪ್ಪ, ‘ ಕನ್ನಡ ಸಾಹಿತ್ಯಕ್ಕೆ ಮಾಧ್ಯಮ ಕ್ಷೇತ್ರದ ಕೊಡುಗೆ’ ವಿಷಯದ ಕುರಿತು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಉಪನ್ಯಾಸ ನೀಡಲಿದ್ದಾರೆ.

ಮಧ್ಯಾಹ್ನದ ನಂತರ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯತ್ರಿ ಸಂಗೀತ ರವಿರಾಜ್ ವಹಿಸಲಿದ್ದು, ಅನೇಕ ಕವಿಗಳು ಪಾಲ್ಗೊಳ್ಳಲಿದ್ದಾರೆ.

ಬಹಿರಂಗ ಅಧಿವೇಶನದ ಅಧ್ಯಕ್ಷತೆಯನ್ನು ಮಡಿಕೆÉೀರಿ ತಾಲೂಕು ಕಸಾಪ ಅಧಕ್ಷÀ್ಷ ಕುಡೆಕಲ್ ಸಂತೋಷ್ ವಹಿಸಲಿದ್ದು, ಗೌರವ ಕಾರ್ಯದರ್ಶಿ ಕೂಡಕಂಡಿ ದಯಾನಂದ ನಿರ್ಣಯ ಮಂಡಿಸಲಿದ್ದಾರೆ. ಸಂಜೆ ಕುಡೆಕಲ್ ಸಂತೋಷ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಬಿ.ಎ.ಷಂಶುದ್ದೀನ್ ಅವರು ಆಶಯ ನುಡಿಯಾಡಲಿದ್ದಾರೆ.

ಲೋಕೇಶ್ ಸಾಗರ್ ಅವರು ಸಮ್ಮೇಳನಾಧ್ಯಕ್ಷರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೊಲ್ಯದ ಗಿರೀಶ್, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಮತ್ತಿತರರು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಐತಿಚಂಡ ರಮೇಶ್ ಉತ್ತಪ್ಪ, ಕ್ರೀಡಾ ಕ್ಷೇತ್ರ ಬಾಬು ಸೋಮಯ್ಯ, ಸಮಾಜ ಸೇವೆ ರಾಮಚಂದ್ರ, ಮಾಧ್ಯಮ ಕ್ಷೇತ್ರ ಕಾಯಪಂಡ ಶಶಿ ಸೋಮಯ್ಯ, ಶಿಕ್ಷÀಣ ಕ್ಷೇತ್ರ ಕಂಬೀರಂಡ ಕಿಟ್ಟು ಕಾಳಪ್ಪ, ಜನಪದ ಮಲೆಯರ ಚಂಗಪ್ಪ, ನಾಟಿ ವೈದ್ಯ ಬಳ್ಳಡ್ಕ ಅಪ್ಪಾಜಿ, ಕೃಷಿ ಕ್ಷೇತ್ರ ಕೊಪ್ಪದ ಭುವನೇಶ್ವರ, ನೃತ್ಯ ಜಲಜಾ ನಾಗರಾಜ್, ವಾದ್ಯ ಸಂಗೀತ ಅಂಬಳೆ ಸತ್ಯಪ್ರಸಾದ್, ರಂಗಭೂಮಿ ಪಿ.ಯು. ಸುಂದರ, ಕಲೆ ಪದ್ಮನಾಭ, ಕನ್ನಡದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಕುಮಾರಿ ಸುಫಿಯಾನ, ಎನ್‍ಸಿಸಿ ಆರ್‍ಡಿ ಪೆರೇಡ್ ಮುನ್ನಡೆಸಿದ ಕುಮಾರಿ ಅಜ್ಜಿನಿಂಡ ಐಶ್ವರ್ಯ ದೇಚಮ್ಮ ಅವರುಗಳನ್ನು ಸನ್ಮಾನಿಸಲಾಗುವದೆಂದು ಲೋಕೇಶ್ ಸಾಗರ್ ಮಾಹಿತಿ ನೀಡಿದರು.

ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ, ಕನ್ನಡದ ಹಬ್ಬವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಾಡಿನ ಜನತೆ, ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರ ಅತ್ಯವಶ್ಯ. ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ನಗರಸಭೆಯೂ ಕೈಜೋಡಿಸಿದ್ದು, ಕನ್ನಡದ ಉತ್ಸವಕ್ಕೆ ನಗರವನ್ನು ಅಲಂಕರಿಸಿ ಸಹಕರಿಸಲಿರುವದಾಗಿ ತಿಳಿಸಿದರು.

ಸಮ್ಮೇಳನದ ಸಾಂಸ್ಕøತಿಕ ಸಮಿತಿ ಅಧ್ಯಕ್ಷೆ ಭಾರತೀ ರಮೇಶ್ ಮಾತನಾಡಿ, ಸಂಜೆ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮವನ್ನು ಕಲಾವಿದರು ಹಾಗೂ ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಉದ್ಘಾಟಿಸಲಿದ್ದು, ಜಾನಪದ ಪರಿಷತ್‍ನ ಮಡಿಕೇರಿ ತಾಲೂಕು ಅಧ್ಯಕ್ಷ ಅನಿಲ್ ಎಚ್.ಟಿ. ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡವ ಮತ್ತು ಅರೆಭಾಷಾ ಅಕಾಡೆಮಿಗಳ ತಂಡಗಳು ಸೇರಿದಂತೆ 12 ಕಲಾ ತಂಡಗಳು ಸಾಂಸ್ಕøತಿಕ ಕಾರ್ಯಕ್ರಮವನ್ನು ನೀಡಲಿರುವದಾಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್, ಮಡಿಕೆÉೀರಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಕೂಡಕಂಡಿ ದಯಾನಂದ ಹಾಗೂ ಕೋಶಾಧಿಕಾರಿ ಯೋಗೇಂದ್ರ ಉಪಸ್ಥಿತರಿದ್ದರು.