ನಾಪೋಕ್ಲು, ಜೂ. 16: ಸಮೀಪದ ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ಬಿಳಿಯಂಡ್ರ ರತೀಶ್ ಕುಮಾರ್ ಸರಕಾರದಿಂದ ನೀಡಲಾಗುವ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಿದರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಬಿ.ಜೆ. ಕವಿತಾ, ಮುಖ್ಯ ಶಿಕ್ಷಕಿ ಬಿ.ಎನ್. ಚಂಪಕ, ಸಹ ಶಿಕ್ಷಕರು ಉಪಸ್ಥಿತರಿದ್ದರು.