ಮಡಿಕೇರಿ, ಜೂ. 16: ಭಾರತೀಯ ಜನತಾ ಪಾರ್ಟಿ ಕೊಡಗು ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಪೂರ್ಣ ಆರೋಗ್ಯ ಸೇವೆಗಳ ನಿಟ್ಟಿನಲ್ಲಿ ಒಂದು ಕಾರ್ಯಕ್ರಮವಾಗಿರುವ ಜನೌಷಧ ಕುರಿತು ಅರಿವು ಕಾರ್ಯಕ್ರಮ ನಡೆಯಲಿದೆ.ಮಡಿಕೇರಿಯ ಪತ್ರಿಕಾ ಭವನ ಸಭಾಂಗಣದಲ್ಲಿ ತಾ. 18 ರಂದು ಸಂಸದ ಪ್ರತಾಪ್ ಸಿಂಹ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬ್ಯೂರೋ ಆಫ್ ಫಾರ್ಮ ಪಬ್ಲಿಕ್ ಸೆಕ್ಟರ್ ಅಂಡರ್ ಟೇಕಿಂಗ್ಸ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿಪ್‍ಲ್ಯಾಬ್ ಚಟರ್ಜಿ, ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಅಧ್ಯಕ್ಷ ಬಿ.ಬಿ. ಭಾರತೀಶ್ ಪಾಲ್ಗೊಳ್ಳಲಿದ್ದಾರೆ.

ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ. ಬಿ.ಸಿ. ನವೀನ್ ಕುಮಾರ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಜನೌಷಧದ ಸಾಧಕಗಳ ಕುರಿತು ಬ್ಯೂರೋ ಆಫ್ ಫಾರ್ಮ ಪಬ್ಲಿಕ್ ಸೆಕ್ಟರ್ ಅಂಡರ್ ಟೇಕಿಂಗ್ಸ್ ಆಫ್ ಇಂಡಿಯಾದ ಸೀನಿಯರ್ ಮಾರ್ಕೆಟಿಂಗ್ ಆಫೀಸರ್ ಡಾ. ಅನಿಲ್ ಮಾತನಾಡಲಿದ್ದಾರೆ. ಜನೌಷಧದ ಬಾಧಕಗಳ ಬಗ್ಗೆ ಕರ್ನಾಟಕ ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಕಾನೂನು ಸಲಹಾ ಸಮಿತಿಯ ಸದಸ್ಯ ಕೆ. ಹರೀಶ್ ಮಾತನಾಡಲಿದ್ದಾರೆ. ಸಮನ್ವಯ ಭಾಷಣವನ್ನು ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.