ಮಡಿಕೇರಿ, ಜೂ. 16: ಸೋಮವಾರಪೇಟೆ ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2017-18ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಪ.ಜಾ/ಪ.ವರ್ಗ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರ ಹಿಂದುಳಿದ ವರ್ಗ ಮತ್ತು ಇತರ ರೂ. 1 ಲಕ್ಷ., ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿದೆ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ನೋಡಬಹುದು. ತಾಂತ್ರಿಕ ತೊಂದರೆಗಳಾದಲ್ಲಿ bಛಿತಿhosಣeಟಚಿಜmissioಟಿ@gmಚಿiಟ.ಛಿom ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವದು. ಹೆಚ್ಚಿನ ಮಾಹಿತಿಗೆ 080-65970006 ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲೂಕು ಕಚೇರಿ ವೇಳೆಯಲ್ಲಿ ದೂ. 08276-284820 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಸೋಮವಾರಪೇಟೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕೋರಿದ್ದಾರೆ.

ಶಿಷ್ಯ ವೇತನಕ್ಕಾಗಿ

2017-18ನೇ ಸಾಲಿನಲ್ಲಿ 1 ನೇ ತರಗತಿಯಿಂದ ಒಂದು ಪದವಿಯವರೆಗೆ (ವೃತ್ತಿಪರ ಶಿಕ್ಷಣ ಹೊರತಾಗಿ) ಓದುತ್ತಿರುವ (ಜೆಸಿಒ ಹಾಗೂ ಅಧಿಕಾರಿಗಳ ಹೊರತಾಗಿ) ಹವಾಲ್ದಾರ್ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳಿಗೆ ಕೇಂದ್ರೀಯ ಸೈನಿಕ ಮಂಡಳಿಗೆ ಶಿಷ್ಯ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ತಿತಿತಿ.ಞsb.gov.iಟಿ ನ್ನು ಬಳಸಬಹುದಾಗಿದೆ ಎಂದು ಮಡಿಕೇರಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಸಹಾಯ ಧನಕ್ಕೆ

ಕೊಡಗು ಜಿಲ್ಲೆಯಲ್ಲಿ 2017-18 ನೇ ಸಾಲಿನ ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿ.ಎಂ.ಇ.ಜಿ.ಪಿ) ಯಡಿ ಕನಿಷ್ಟ 8 ನೇ ತರಗತಿಯಲ್ಲಿ ತೇರ್ಗಡೆಯಾಗಿರುವ ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ 21 ರಿಂದ 35 ವರ್ಷ ವಯೋಮಿತಿಯ ಹಾಗೂ ವಿಶೇಷ ವರ್ಗದವರಿಗೆ (ಎಸ್.ಸಿ/ ಎಸ್.ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ವಿಕಲಚೇತನರು, ಮಾಜಿ ಸೈನಿಕರು ಮತ್ತು ಮಹಿಳೆಯರು) ಗರಿಷ್ಠ 45 ವರ್ಷ ವಯೋಮಿತಿ ಹೊಂದಿದ ನಿರುದ್ಯೋಗಿ ಯುವಕ-ಯುವತಿಯರಿಗೆ ಕಿರು ಕೈಗಾರಿಕಾ ಘಟಕ ಸ್ಥಾಪಿಸುವ ಮೂಲಕ ಸ್ವ-ಉದ್ಯೋಗ ಮಾಡಿಕೊಳ್ಳುವವರಿಗೆ ಬ್ಯಾಂಕಿನಿಂದ ಗರಿಷ್ಠ ರೂ. 10 ಲಕ್ಷಗಳವರೆಗೆ ಸಾಲ ನೀಡಿ ಗರಿಷ್ಠ ಶೇ. 25 ರಿಂದ ಶೇ. 35 ರವರೆಗೆ ಸಹಾಯಧನ ನೀಡಲಾಗುತ್ತದೆ.

ಈ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಜುಲೈ 3 ರವರೆಗೆ ಕಾಲಾವಧಿಯನ್ನು ವಿಸ್ತರಿಸಲಾಗಿರುತ್ತದೆ. ವೆಬ್‍ಸೈಟ್ ವಿಳಾಸ ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಕಚೇರಿ ದೂರವಾಣಿ ಸಂಖ್ಯೆ: 08272-228431 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಶೈಕ್ಷಣಿಕ ಪ್ರಶಸ್ತಿಗೆ

2016-17ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಯನ್ನು ಮಂಜೂರು ಮಾಡಲು ತ್ರಿಪ್ರತಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಈ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿರುತ್ತದೆ. ಅರ್ಜಿಯ ಮಾದರಿಗಳನ್ನು ಜಂಟಿ ನಿರ್ದೇಶಕರ, ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಇವರಿಂದ ಪಡೆಯಬಹುದಾಗಿದೆ ಎಂದು ಮಡಿಕೇರಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಶಿಷ್ಯ ವೇತನಕ್ಕೆ

2017-18ನೇ ಸಾಲಿಗೆ ಕರ್ನಾಟಕ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರ ಮಕ್ಕಳ ಶಿಷ್ಯ ವೇತನ ಸೆಪ್ಟೆಂಬರ್ 30 ರವರೆಗೆ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿಯಲ್ಲಿ ಶಿಷ್ಯವೇತನ ಅರ್ಜಿ ವಿತರಿಸಲಾಗುವದು. ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಜಿ ಸೈನಿಕರ ಮೂಲ ಸೇವಾ ಪುಸ್ತಕ ಅಥವಾ ಗುರುತಿನ ಚೀಟಿಯೊಂದಿಗೆ ಖುದ್ದಾಗಿ ಅರ್ಜಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವದು ಎಂದು ಮಡಿಕೇರಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.