ಮಡಿಕೇರಿ, ಜೂ. 18: ಸ.ಹಿ.ಪ್ರಾ. ಶಾಲೆ ಚೀನಿವಾಡದಲ್ಲಿ ಸೈಕಲ್ ಹಾಗೂ ಶೂ ಸಾಕ್ಸ್ ವಿತರಣಾ ಸಮಾರಂಭ ನಡೆದು ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಜಾ ಸಾಜಿ ಅಚ್ಚುತ್ತನ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಚಲನ್ ಕುಮಾರ್ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.ಈ ಸಂದರ್ಭ ಮಾತನಾಡಿದ ಚಲನ್ ಕುಮಾರ್ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಶಿಕ್ಷಣ ಗಳಿಸಲು ಅನುಕೂಲವಾಗುವಂತೆ 8ನೇ ತರಗತಿ ಮಕ್ಕಳಿಗೆ ಉಚಿತವಾಗಿ ಸೈಕಲನ್ನು ನೀಡುತ್ತಿದೆ. ಎಲ್ಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲೆಗೆ ಹಾಜರಾಗಿ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಪ್ರಜೆಗಳಾಗುವಂತೆ ಸಲಹೆ ನೀಡಿದರು. ಶ್ರೀಜಾ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳೊಂದಿಗೆ ಉತ್ತಮ ಶಿಕ್ಷಣವನ್ನು ಪಡೆಯಬೇಕೆಂದು ಸಲಹೆ ನೀಡಿದರು. ಈ ಸಂದರ್ಭ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಸಾದುಲಿ ಹಾಗೂ ಸಮದ್ ಹಾಜರಿದ್ದರು. ಮುಖ್ಯ ಶಿಕ್ಷಕಿ ವಾಮನ ಕಾರ್ಯಕ್ರಮ ನಿರ್ವಹಿಸಿದರು.