ಸಿದ್ದಾಪುರ, ಜೂ. 18: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸಿದ್ದಾಪುರ ಪಟ್ಟಣದಲ್ಲಿ ಪರಿಸರ ಜಾಗೃತಿ ಬಗ್ಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.ಹಳೇ ಸಿದ್ದಾಪುರದಿಂದ ಆರಂಭವಾದ ಜಾಥವನ್ನು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉಸ್ಮಾನ್ ಹಾಜಿ ಚಾಲನೆ ನೀಡಿದರು. ಬಳಿಕ ಸಿದ್ದಾಪುರ ಪಟ್ಟಣದಲ್ಲಿ ಜಾಥ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರು ಪರಿಸರ ರಕ್ಷಿಸುವ ಹಾಗೂ ಮರಗಳನ್ನು ಬೆಳೆಸುವ ಬಗ್ಗೆ ಘೋಷಣೆ ಕೂಗಿ ಜಾಗೃತಿ ಮೂಡಿಸಿದರು.

ಬಳಿಕ ಕಾಂಗ್ರಸ್ ಪಕ್ಷದ ಮುಖಂಡರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಗಿಡಗಳನ್ನು ನೆಟ್ಟರು. ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯ ಟಿ.ಪಿ. ರಮೇಶ್, ಇತ್ತೀಚೆಗಿನ ದಿನಗಳಲ್ಲಿ ಪರಿಸರ ನಾಶವಾಗುತ್ತಿದ್ದು, ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಗಿಡಗಳನ್ನು ನೆಡುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಹೆಜ್ಜೆ ಇಟ್ಟಿರುವದು ಶ್ಲಾಘನೀಯ ಎಂದರು.

ರಾಜ್ಯ ಅರಣ್ಯ ನಿಗಮ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಮಾತನಾಡಿ, ಪ್ರಾಣಿ, ಪಕ್ಷಿಗಳು, ಜಲಸಂಪತ್ತು, ಅರಣ್ಯ ಸಂಪತ್ತು ಸೇರಿದಂತೆ ಮಾನವನ ವಾಸಕ್ಕೆ ಪ್ರಕೃತಿ ಅತ್ಯವಶ್ಯಕ. ಅರಣ್ಯ ನಾಶ ಹಾಗೂ ಪರಿಸರ ನಾಶದಿಂದಾಗಿ ಮುಂದಿನ ಪೀಳಿಗೆಗೆ ತೊಂದರೆಯಾಗಲಿದ್ದು, ಮರ ಕಡಿಯುವ ಸಂದರ್ಭ ದುಪ್ಪಟ್ಟು ಗಿಡಗಳನ್ನು ನೆಡಬೇಕೆಂದು ಕರೆ ನೀಡಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಅರುಣ್ ಮಾಚಯ್ಯ ಮಾತನಾಡಿ, ಜಾಗತಿಕ ತಾಪಮಾನವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ವಿಜ್ಞಾನಿಗಳು ಸೇರಿದಂತೆ ಎಲ್ಲರೂ ಚಿಂತಿಸುತ್ತಿದ್ದಾರೆ. ಪ್ರಪಂಚದ 17 ಘಟ್ಟಗಳಲ್ಲಿ ಪಶ್ಚಿಮಘಟ್ಟವು ಪ್ರಮುಖವಾಗಿದ್ದು, ಪಶ್ಚಿಮ ಘಟ್ಟದಲ್ಲಿ ಅಸಮತೋಲನ ಹೊಂದಿದರೆ ಜಗತ್ತಿಗೆ ಕಂಟಕವಾಗಲಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಘಟವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಭಾರತವೂ ಕೂಡ ಸಹಿ ಹಾಕಿದೆ. ಹೆಚ್ಚಿನ ಗಿಡಮರಗಳನ್ನು ಬೆಳÉಸುವದರೊಂದಿಗೆ ಜಾಗತಿಕ ತಾಪಮಾನ ಕಡಿಮೆ ಮಾಡಬೇಕಾಗುತ್ತದೆ ಎಂದರು.

ಜಿ.ಪಂ. ಸದಸ್ಯೆ ಚಂದ್ರಕಲಾ ಮಾತನಾಡಿ, ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಕಳೆದ ಹಲವು ವರ್ಷಗಳಿಂದ ನಿಶ್ಕ್ರೀಯವಾಗಿದ್ದು, ಇದೀಗ ಮರುಜೀವ ಬಂದಂತಾಗಿದೆ. ಯುವಕರು ಸಾಮಾಜಿಕ ಕಳಕಳಿಯಿಂದ ಕಾರ್ಯಕ್ರಮವನ್ನು ಹಮ್ಮಿಕೋಂಡಿರುವದು ಸಂತೋಷದ ವಿಚಾರವಾಗಿದೆ ಎಂದರು.

ಕಾಂಗ್ರೆಸ್ ಮುಖಂಡ ವಿ.ಪಿ. ಶಶಿಧರ್ ಮಾತನಾಡಿ, ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆಯಿತ್ತರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಂ.ಎಸ್. ವೆಂಕಟೇಶ್ ಮಾತನಾಡಿ, ಯುವ ಕಾಂಗ್ರೆಸ್ ಈಗಾಗಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಪರಿಸರದ ಬಗ್ಗೆ ಕಳಕಳಿ ಹೊಂದಿದೆ ಎಂದರು.

ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ. ಸಲಾಂ ಮಾತನಾಡಿ, ಪರಿಸರವನ್ನು ರಕ್ಷಿಸುವದು ಪ್ರತಿಯೊಬ್ಬರ ಕರ್ತವ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ ವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕೆಲಸ ಮಾಡುವದಾಗಿ ತಿಳಿಸಿದರು.

ಈ ಸಂದರ್ಭ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ತಾ.ಪಂ. ಸದಸ್ಯೆ ಸುಹದಾ ಅಶ್ರಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್, ಶಾಫಿ, ಮುರುಗ, ಹೂವಯ್ಯ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಡಿಕೇರಿ ಕ್ಷೇತ್ರದ ಅಧ್ಯಕ್ಷ ಮಿಥುನ್ ಹಾನಗಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಬಷೀರ್, ಕಾಂಗ್ರೆಸ್ ಮುಖಂಡರಾದ ಎ.ಕೆ. ಹಕೀಂ, ತಣ್ಣೀರ ಮೈನಾ, ರಾಜು ಅಪ್ಪಯ್ಯ, ಚೇಕು, ಜಾನ್ಸನ್, ಸಿದ್ದಾಪುರ ವೈದಾಧಿಕಾರಿ ಡಾ. ರಾಘವೇಂದ್ರ, ಗ್ರಾ.ಪಂ. ಸದಸ್ಯರಾದ ದೇವಜಾನು, ಶಿವಕುಮಾರ್, ಪ್ರತಿಮಾ ಚಂದ್ರಶೇಖರ್, ಖಾದರ್, ಶೈಲಾ, ಶುಕೂರ್, ಯುವ ಕಾಂಗ್ರೆಸ್ ಪ್ರಮುಖರಾದ ನವೀದ್ ಖಾನ್, ಸಿದ್ದೀಕ್, ಇಲಿಯಾಸ್, ಸರ್ಫು, ಪ್ರಕಾಶ್ ಸೇರಿದಂತೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿದ್ದರು.