ಮಡಿಕೇರಿ, ಜೂ. 20: ರಾಜ್ಯ ಅರಣ್ಯ ಸಚಿವ ರಮಾನಾಥ್ ರೈ ಅಧಿಕಾರ ದುರ್ಬಳಕೆ ಮಾಡಿ ಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿರುವ ಹಿಂದೂಪರ ಸಂಘಟನೆಗಳು ಕ್ರಿಕೆಟ್‍ನಲ್ಲಿ ಭಾರತ ತಂಡದ ವಿರುದ್ಧ ಜಯಗಳಿಸಿದ ಪಾಕ್ ಪರ ಭಾರತ ವಿರೋಧಿ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಲಾಯಿತು.ರಾಜ್ಯ ಅರಣ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರು ಕಲ್ಲಡ್ಕದಲ್ಲಿ ಇತ್ತೀಚೆಗೆ ಎರಡು ಗುಂಪುಗಳ ನಡುವೆ ನಡೆದ ಗಲಭೆಗೆ ಸಂಬಂಧಿಸಿದಂತೆ ಅಲ್ಲಿ ಶಾಂತಿಯನ್ನು ಸ್ಥಾಪಿಸಲು ಪ್ರಯತ್ನಿಸುವದನ್ನು ಬಿಟ್ಟು ಅಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರನ್ನು ಅತಿಥಿಗೃಹಕ್ಕೆ ಕರೆಸಿ ಕೊಂಡು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ

(ಮೊದಲ ಪುಟದಿಂದ) ಮುಖಂಡ ಡಾ|| ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಹಿಂದೂ ಸಂಘಟನೆಗಳ ಮುಖಂಡರುಗಳ ವಿರುದ್ಧ 307ರಡಿಯಲ್ಲಿ ಮೊಕದ್ದಮೆ ದಾಖಲಿಸುವಂತೆ ಒತ್ತಡ ಹೇರಿದ್ದಾರೆ. ಇದು ತೀವ್ರ ಖಂಡನೀಯ. ಶಾಂತಿ ಸ್ಥಾಪಿಸಲು ಪ್ರಯತ್ನಿಸುವ ಬದಲು ಸಚಿವರು ಕೋಮು ಪ್ರಚೋದನೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ ಸಚಿವರ ವಿರುದ್ಧ ಘೋಷಣೆ ಕೂಗಿದರು.

ಅಲ್ಲದೆ ಇತ್ತೀಚೆಗೆ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಜಯಗಳಿಸಿದ ಬಳಿಕ ಹೊಸಕೋಟೆಯಲ್ಲಿ ದುಷ್ಕರ್ಮಿಗಳು ಪಾಕಿಸ್ತಾನ ಧ್ವಜ ಹಿಡಿದು ಪಾಕ್ ಪರ ಘೋಷಣೆ ಕೂಗಿದ್ದಾರೆ. ಇದು ದೇಶದ್ರೋಹದ ಕೃತ್ಯವಾಗಿದ್ದು, ಇವರ ವಿರುದ್ಧ ದೇಶದ್ರೋಹದ ಆಪಾದನೆ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

(ಮೊದಲ ಪುಟದಿಂದ) ಮುಖಂಡ ಡಾ|| ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಹಿಂದೂ ಸಂಘಟನೆಗಳ ಮುಖಂಡರುಗಳ ವಿರುದ್ಧ 307ರಡಿಯಲ್ಲಿ ಮೊಕದ್ದಮೆ ದಾಖಲಿಸುವಂತೆ ಒತ್ತಡ ಹೇರಿದ್ದಾರೆ. ಇದು ತೀವ್ರ ಖಂಡನೀಯ. ಶಾಂತಿ ಸ್ಥಾಪಿಸಲು ಪ್ರಯತ್ನಿಸುವ ಬದಲು ಸಚಿವರು ಕೋಮು ಪ್ರಚೋದನೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ ಸಚಿವರ ವಿರುದ್ಧ ಘೋಷಣೆ ಕೂಗಿದರು.

ಅಲ್ಲದೆ ಇತ್ತೀಚೆಗೆ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಜಯಗಳಿಸಿದ ಬಳಿಕ ಹೊಸಕೋಟೆಯಲ್ಲಿ ದುಷ್ಕರ್ಮಿಗಳು ಪಾಕಿಸ್ತಾನ ಧ್ವಜ ಹಿಡಿದು ಪಾಕ್ ಪರ ಘೋಷಣೆ ಕೂಗಿದ್ದಾರೆ. ಇದು ದೇಶದ್ರೋಹದ ಕೃತ್ಯವಾಗಿದ್ದು, ಇವರ ವಿರುದ್ಧ ದೇಶದ್ರೋಹದ ಆಪಾದನೆ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹ ಮಾತನಾಡಿ, ಪಾಕ್ ಕ್ರಿಕೆಟ್‍ನಲ್ಲಿ ಜಯಗಳಿಸಿದ ಬಳಿಕ ಪಾಕ್ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿರುವದು ಅಕ್ಷಮ್ಯ ಅಪರಾಧವಾಗಿದೆ. ಒಂದು ವೇಳೆ ಪಾಕಿಸ್ತಾನ ಭಾರತದ ಮೇಲೆ ಯುದ್ಧ ಸಾರಿದರೆ ಇಂತಹವರು ಭಾರತದ ವಿರುದ್ಧವೇ ದಂಗೆ ಏಳುವ ಅಪಾಯವಿದೆ. ಪಾಕಿಸ್ತಾನ ಪರವಿರುವವರು ಭಾರತ ವಿರೋಧಿ ಘೋಷಣೆ ಕೂಗುವವರು ಪಾಕ್‍ಗೆ ತೆರಳಬಹುದು. ಇಂತಹವರನ್ನು ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸುವ ಅಗತ್ಯವಿದೆ ಎಂದರು.

ಹಿಂದೂ ಸಂಘಟನೆ ಮುಖಂಡ ಡಾ. ಪ್ರಭಾಕರ್ ಭಟ್ ವಿರುದ್ಧ 307 ರಡಿಯಲ್ಲಿ ಕೇಸ್ ದಾಖಲಿಸಲು ಪೊಲೀಸ್ ಅಧಿಕಾರಿಗಳಿಗೆ ಒತ್ತಡ ಹೇರಿರುವ ಸಚಿವ ರಮಾನಾಥ್ ರೈ ಅವರನ್ನು ತಕ್ಷಣ ಸರ್ಕಾರದಿಂದ ವಜಾಗೊಳಿಸುವಂತೆ ಆಗ್ರಹಿಸಿದರು.

ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ, ಸಾವಿರಾರು ದೇಶಭಕ್ತರನ್ನು ತಯಾರು ಮಾಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಅವರ ವಿರುದ್ಧ ಸರ್ಕಾರದ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವÀ ರಮಾನಾಥ್ ರೈ ಪಿತೂರಿ ನಡೆಸಿರುವದು ಖಂಡನೀಯ. ಸಂಘ ಪರಿವಾರ ದೇಶದ ವಿರುದ್ಧ ಇಲ್ಲ. ಸಮಾಜಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ. ಪಿಎಫ್‍ಐ ಸೇರಿದಂತೆ ರಾಷ್ಟ್ರ ವಿರೋಧಿ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳಿ. ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿನಾಃ ಕಾರಣ ಆರೋಪ ಹೊರಿಸಿ ಧಮನ ಮಾಡಲು ಸಾಧ್ಯವಿಲ್ಲ. ಇದು ಕಾಂಗ್ರೆಸ್ ಮುಕ್ತ ಸರ್ಕಾರ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಹಕಾರ ನೀಡುವಂತಾಗಿದೆ ಎಂದು ಹೇಳಿದರು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾ ಉಪಾಧ್ಯಕ್ಷ ಡಿ.ಎಚ್. ಮೇದಪ್ಪ, ಭಜರಂಗದಳ ಜಿಲ್ಲಾ ಸಹ ಸಂಚಾಲಕ ಕೆ.ಎಚ್. ಚೇತನ್, ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕ ಅಜಿತ್, ಮಡಿಕೇರಿ ತಾಲೂಕು ಸಂಚಾಲಕ ಮಹೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಪ್ರಧಾನ ಕಾರ್ಯದರ್ಶಿಗಳಾದ ಶಾಂತೆಯಂಡ ರವಿ ಕುಶಾಲಪ್ಪ, ರಾಬಿನ್ ದೇವಯ್ಯ, ಜಿಲ್ಲಾ ವಕ್ತಾರ ಎನ್.ಎಂ. ರವಿಕಾಳಪ್ಪ, ಜಿಲ್ಲಾ ಎಸ್‍ಸಿ ಮೋರ್ಚಾ ಅಧ್ಯಕ್ಷ ಎಸ್.ಸಿ. ಸತೀಶ್, ನಗರ ಅಧ್ಯಕ್ಷ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಅರುಣ್‍ಕುಮಾರ್, ನಗರಸಭಾ ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್, ಸದಸ್ಯ ಪಿ.ಡಿ. ಪೊನ್ನಪ್ಪ, ಪ್ರಮುಖರಾದ ಕಾಳಚಂಡ ಅಪ್ಪಣ್ಣ, ಧನಂಜಯ, ನಂದೀಶ್, ಕುಮಾರ್ ಹಾಗೂ ಇನ್ನಿತರರು ಇದ್ದರು.

ಕುಶಾಲನಗರ: ಪಾಕಿಸ್ತಾನ ಪರ ಜಯಕಾರ ಹಾಕಿದ ದೇಶ ದ್ರೋಹಿಗಳನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕುಶಾಲನಗರದ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಕಾರ್ಯಕರ್ತರು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ದೇಶಕ್ಕೆ ಅಪಮಾನ ಎಸಗಿದವರನ್ನು ಕೂಡಲೇ ಗಡಿಪಾರು ಮಾಡಬೇಕಿದೆ. ಆರ್‍ಎಸ್‍ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಚಿವ ರಮಾನಾಥ್ ರೈ ಬಂಧನಕ್ಕೆ ಆದೇಶಿಸಿರುವ ಕ್ರಮವನ್ನು ಖಂಡಿಸಿ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಲಕಾಲ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.

ಈ ಸಂದರ್ಭ ಸುದ್ದಿಗಾರ ರೊಂದಿಗೆ ಮಾತನಾಡಿದ ಆರ್‍ಎಸ್‍ಎಸ್ ಹಿರಿಯ ಮುಖಂಡ ಚಂಗು ತಿಮ್ಮಪ್ಪ, ದೇಶ ವಿರೋಧಿ ಚಟುವಟಿಕೆಗಳು ಅಧಿಕಗೊಳ್ಳುತ್ತಿದ್ದು ದೇಶದ್ರೋಹಿ ಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಿದೆ. ಜಿಲ್ಲೆಯಲ್ಲಿ ಅಶಾಂತಿ ಉಂಟು ಮಾಡುವ ಮೂಲಕ ಸುಸ್ಥಿರತೆ ಕೆಡಿಸಲು ಯತ್ನಿಸುತ್ತಿರುವ ಶಕ್ತಿಗಳನ್ನು ಮಟ್ಟಹಾಕಬೇಕಿದೆ ಎಂದು ಆಗ್ರಹಿಸಿದರು.

ಯಾವದೇ ಸಕಾರಣ ಇಲ್ಲದೆ ದುರುದ್ದೇಶದಿಂದ ಪ್ರಭಾಕರ್ ಭಟ್ ವಿರುದ್ಧ ಸಚಿವ ರಮಾನಾಥ್ ರೈ ಬಂಧನಕ್ಕೆ ಆಗ್ರಹಿಸಿರುವ ಕ್ರಮ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಕೆ.ಜಿ. ಮನು, ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ತಾಲೂಕು ಪಂಚಾಯ್ತಿ ಸದಸ್ಯ ಗಣೇಶ್, ಕುಶಾಲನಗರ ಪಟ್ಟಣ ಪಂಚಾಯ್ತಿ ಸದಸ್ಯರಾದ ಹೆಚ್.ಎಂ. ಮಧುಸೂದನ್, ಕೂಡುಮಂಗಳೂರು ಗ್ರಾಮಪಂಚಾಯ್ತಿ ಸದಸ್ಯ ಭಾಸ್ಕರ್ ನಾಯಕ್ ಹಿಂದೂಪರ ಸಂಘಟನೆಗಳ ಪ್ರಮುಖರಾದ ಮಂಜುನಾಥ್, ಅನೀಶ್, ಮಂಡೇಪಂಡ ಬೋಸ್ ಮೊಣ್ಣಪ್ಪ, ಹೆಚ್.ಡಿ. ಶಿವಾಜಿ, ಹೆಚ್.ಎನ್. ರಾಮಚಂದ್ರ, ವೈಶಾಖ್, ಪ್ರವೀಣ್, ಚಂದ್ರಶೇಖರ್, ಕಿರಣ, ಮಣಿ ಮತ್ತಿತರರು ಇದ್ದರು.