ಮಡಿಕೇರಿ, ಜೂ. 18: ಶನಿವಾರಸಂತೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಅಂಕನಹಳ್ಳಿ ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವದರಿಂದ ತಾ. 19 ರಂದು (ಇಂದು) ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶನಿವಾರಸಂತೆ ವಿದ್ಯುತ್ ಉಪ ಕೇಂದ್ರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು.

ಅಂಕನಹಳ್ಳಿ, ಸೀಗೆಮರೂರು, ಕ್ಯಾತನಹಳ್ಳಿ, ಸಂಪಿಗೆದಾಳು, ದೊಡ್ಡಳ್ಳಿ, ಸಿಡಿಗಳಲೆ, ಹಾರೆಹೊಸೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವದಿಲ್ಲ.

ಹಾಗೆಯೇ ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. 19 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 3 ಗಂಟೆಯವರೆಗೆ, ವೀರಾಜಪೇಟೆ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು.

ವೀರಾಜಪೇಟೆ, ಬಿ. ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ನೆಲ್ಲಿಹುದಿಕೇರಿ, ಮೂರ್ನಾಡು, ಮರುಗೋಡು, ನಾಪೋಕ್ಲು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.