ಮಡಿಕೇರಿ, ಜೂ.19: ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಮ್ಯೂಸಿಯಂ ಕಾಮಗಾರಿಯು ವಿಳಂಬವಾಗುತ್ತಿದ್ದು, ತುರ್ತಾಗಿ ಪೂರ್ಣಗೊಳಿಸಬೇಕಿದೆ ಎಂದು ವಿಧಾನ ಪರಿಷತ್ ಸದಸೆÀ್ಯ ವೀಣಾ ಅಚ್ಚಯ್ಯ ಮನವಿ ಮಾಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸರಕಾರದ ಗಮನ ಸೆಳೆದ ವೀಣಾ ಅಚ್ಚಯ್ಯ ಆದಷ್ಟು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅವರು (ಮೊದಲ ಪುಟದಿಂದ) ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಅವರಲ್ಲಿ ಕೋರಿದ್ದಾರೆ.
ಇದಕ್ಕೆ ಮಾಹಿತಿ ನೀಡಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಜನರಲ್ ತಿಮ್ಮಯ್ಯ ಮ್ಯೂಸಿಯಂ ನಿರ್ಮಾಣಕ್ಕೆ ಈಗಾಗಲೇ 550 ಲಕ್ಷ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಿ 45 ಲಕ್ಷ ರೂ.ವನ್ನು ಜಿಲ್ಲಾಧಿಕಾರಿ ಅವರಿಗೆ ಬಿಡುಗಡೆ ಮಾಡಲಾಗಿದೆ. ಸಾರಿಗೆ ಪ್ರಾಧಿಕಾರ ಕಚೇರಿ ಸ್ಥಳಾಂತರ ಪ್ರಕ್ರಿಯೆ ವಿಳಂಬವಾದ ಕಾರಣ ಕಾಮಗಾರಿ ನಿಧಾನವಾಗಿತ್ತು, ಸದ್ಯ ಪ್ರಕ್ರಿಯೆ ಪೂರ್ಣಗೊಂಡಿರುವದರಿಂದ ಜನರಲ್ ತಿಮ್ಮಯ್ಯ ಮ್ಯೂಸಿಯಂ ಕಾಮಗಾರಿ ಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧ ಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸದ್ಯ 230 ಲಕ್ಷ ರೂ. ಅನುದಾನ ಮಂಜೂರು ಮಾಡಲು ಪ್ರಸ್ತಾವನೆ ಬಂದಿದ್ದು, ಪರಿಶೀಲಿಸಿ ಹಣ ಬಿಡುಗಡೆ ಮಾಡಲಾಗುವದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.