ಮಡಿಕೇರಿ ಜೂ.20 :ಮತ ಬ್ಯಾಂಕ್ ರಾಜಕಾರಣಕ್ಕಾಗಿ ರಾಜ್ಯ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರ ತುಷ್ಟೀಕರಣದಲ್ಲಿ ತೊಡಿಗಿರುವ ದರಿಂದಲೇ ರಾಜ್ಯದಲ್ಲಿ ದೇಶದ್ರೋಹದ ಘಟನೆಗಳು ಮರುಕಳಿಸುತ್ತಿವೆ ಎಂದು ಜಿಲ್ಲಾ ಬಿಜೆಪಿ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್, ಸುಂಟಿಕೊಪ್ಪ ಹೋಬಳಿಯ ಏಳನೇ ಹೊಸಕೋಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿದ ಪ್ರಕರಣವನ್ನು ಖಂಡಿಸಿದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸಿತ್ತೆಂದು ಕೆಲವು ದೇಶದ್ರೋಹಿಗಳು ಪಟಾಕಿ ಸಿಡಿಸಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಗುಪ್ತಚರ ಇಲಾಖೆಯ ವೈಫಲ್ಯವೇ ಈ ಬೆಳವಣಿಗೆಗೆ ಕಾರಣವೆಂದು ಆರೋಪಿಸಿದರು.

ಇಂತಹ ದೇಶದ್ರೋಹದ ಘಟನೆಗಳು ಕೊಡಗು ಜಿಲ್ಲೆಯಲ್ಲಿ ಮರುಕಳಿಸುತ್ತಿದ್ದರೂ ಸರಕಾರ ಯಾವದೇ ಕ್ರಮ ಕೈಗೊಳ್ಳುತ್ತಿಲ್ಲ. ಪಾಕ್ ಪರ ಘೋಷಣೆ ಕೂಗಿದವರನ್ನು ರಾತ್ರಿ ಬಂಧಿಸಲಾಗಿದೆ, ಆದರೆ ಬೆಳಗ್ಗಿ ನವರೆಗೂ ಕೇಸ್ ದಾಖಲಿಸಿ ಕೊಂಡಿರಲಿಲ್ಲ. ಇದು ಕಾಂಗ್ರೆಸ್ ಸರಕಾರದ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ ಭಾರತೀಶ್, ಈ ಘಟನೆಯ ಹಿಂದೆ ಯಾರಿದ್ದಾರೆ ಎನ್ನುವದನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಮತ್ತು ದೇಶದ್ರೋಹದ ಕೇಸ್ ದಾಖಲಿಸಿ ಕೊಳ್ಳಬೇಕೆಂದು ಒತ್ತಾಯಿಸಿ ದರು.

ದೇಶದ್ರೋಹದ ಕೆಲಸವನ್ನು ಮಾಡುವವರನ್ನು ಸಮರ್ಥಿಸಿ ಕೊಳ್ಳುವವರು ಕೂಡ ದೇಶದ್ರೋಹಿ ಗಳೇ ಎಂದು ಟೀಕಿಸಿದ ಅವರು ಅರಣ್ಯ ಸಚಿವ ರಮಾನಾಥ ರೈ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಜನಪರವಾಗಿ ಕಾರ್ಯನಿರ್ವ ಹಿಸಬೇಕಾದ ಸಚಿವರು ಅಧಿಕಾರವನ್ನು ದುರ್ಬಳಕೆ ಮಾಡಲು ಮುಂದಾಗಿ ದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯನ್ನು ಎದುರಿಸುತ್ತಿರುವ ರಮಾನಾಥ ರೈ ಸಾಮಾಜಿಕ ಕಳಕಳಿಯ ಹೋರಾಟಗಾರ ಪ್ರಭಾಕರ್ ಭಟ್ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ ಭಾರತೀಶ್, ಬಿಜೆಪಿ ಪ್ರತಿ ಹೋರಾಟಕ್ಕೆ ಸಿದ್ಧವಿದೆ ಎಂದು ಎಚ್ಚರಿಕೆ ನೀಡಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಶಾಲಪ್ಪ ಮಾತನಾಡಿ, ಸಾಧ್ಯವಿದ್ದರೆ ಪ್ರಭಾಕರ್ ಭಟ್ ಅವರನ್ನು ಸರಕಾರ ಬಂಧಿಸಲಿ ಎಂದು ಸವಾಲು ಹಾಕಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ರಾಷ್ಟ್ರಭಕ್ತರನ್ನು, ಸಾಮಾಜಿಕ ಕಳಕಳಿಯ ವ್ಯಕ್ತಿಗಳನ್ನು ಬಂದಿಸಲು ಸೂಚನೆ ನೀಡುತ್ತಿರುವ ಸಚಿವ ರಮಾನಾಥ್ ರೈ ಅವರ ಕ್ರಮ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಭಾಕರ್ ಭಟ್ ಅವರು ಸಾಮಾಜಿಕ ಕಳಕಳಿಯೊಂದಿಗೆ ಶೈಕ್ಷಣಿಕ ಸೇವೆಯಲ್ಲೂ ತೊಡಗಿದ್ದು, ಅಲ್ಪಸಂಖ್ಯಾತರ ಮಕ್ಕಳಿಗೂ ಶಿಕ್ಷಣ ನೀಡುತ್ತಿದ್ದಾರೆ ಎಂದು ರವಿಕುಶಾಲಪ್ಪ ಹೇಳಿದರು.

ಏಳನೇ ಹೊಸಕೋಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ಪರ ಯಾವ ವಕೀಲರು ವಕಾಲತ್ತು ವಹಿಸಬಾರದೆಂದು ಅವರು ಮನವಿ ಮಾಡಿದರು.

ಜಿಲ್ಲಾ ವಕ್ತಾರ ನಾಪಂಡ ರವಿಕಾಳಪ್ಪ ಮಾತನಾಡಿ, ಕೊಡಗಿನಲ್ಲಿ ನೆಲೆ ಇಲ್ಲದ ಕಾಂಗ್ರೆಸ್, ಸೂಕ್ಷ್ಮ ಪರಿಸರ ವಲಯ ಪ್ರದೇಶಕ್ಕೆ ಸಂಬಂಧಿಸಿದಂತೆ ಸಂಸದರು ಹಾಗೂ ಶಾಸಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು. ರಾಜ್ಯ ಸರಕಾರ ಕೇಂದ್ರಕ್ಕೆ ಸೂಕ್ತ ರೀತಿಯಲ್ಲಿ ವರದಿಯನ್ನು ಸಲ್ಲಿಸದಿರುವದೇ ಸಮಸ್ಯೆ ಉದ್ಭವಿಸಲು ಕಾರಣವೆಂದು ಅಭಿಪ್ರಾಯಪಟ್ಟ ಅವರು, ಕಾಂಗ್ರೆಸ್ಸಿಗರು ವಾಸ್ತವಾಂಶವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕರುಗಳಾದ ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚುರಂಜನ್ ಅವರುಗಳು ಸೂಕ್ಷ್ಮ ಪರಿಸರ ವಲಯದ ವಿರುದ್ಧ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಜಿಲ್ಲೆಗೆ ಸಮಸ್ಯೆಗಳು ಎದುರಾದಾಗ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಿದೆ. ಸೂಕ್ಷ್ಮ ಪರಿಸರ ವಲಯದ ವಿಚಾರದಲ್ಲಿ ಈಗ ಉದ್ಭವಿಸಿರುವ ಸಮಸ್ಯೆಗೆ ರಾಜ್ಯ ಸರಕಾರವೇ ನೇರಹೊಣೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ವಕ್ತಾರರಾದ ರತ್ನಾಕರಶೆಟ್ಟಿ, ಸೋಮವಾರಪೇಟೆ ಅಧ್ಯಕ್ಷ ವಿ.ಕೆ. ಲೋಕೇಶ್ ಹಾಗೂ ಪ್ರಮುಖರಾದ ರಾಬಿನ್ ದೇವಯ್ಯ ಉಪಸ್ಥಿತರಿದ್ದರು.