ಕೂಡಿಗೆ, ಜೂ. 20: ಕೂಡಿಗೆ ಗ್ರಾಮ ಪಂಚಾಯಿತಿಯ ಹುದುಗೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ವರ್ಷಂಪ್ರತಿಯಂತೆ ಬೆಳೆಸಿರುವ ವಿವಿಧ ಜಾತಿಯ ಮರಗಳ ಸಸಿಗಳನ್ನು ಜೂನ್ ತಿಂಗಳಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ನೆಟ್ಟು ಬೆಳೆಸಲು ಅನುಕೂಲವಾಗುವ ನಿಟ್ಟಿನಲ್ಲಿ ವಿತರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ವ್ಯಾಪ್ತಿಯಲ್ಲಿ 25 ಸಾವಿರÀಕ್ಕೂ ಅಧಿಕ ಸಸಿಗಳನ್ನು ಬೆಳೆಸಲಾಗಿದ್ದರೂ ಸಮಯಕ್ಕೆ ಸರಿಯಾಗಿ ರೈತರಿಗೆ ವಿತರಣೆ ಮಾಡದೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಭೆ ನಡೆಸಿ ನಂತರ ಸಸಿ ವಿತರಣೆ ಮಾಡಲಾಗುವದು ಎಂದು ಹೇಳುತ್ತಿರುವದು ಸರಿಯಾದ ಕ್ರಮವಲ್ಲ ಎಂದು ಈ ವ್ಯಾಪ್ತಿಯ ಸಾರ್ವಜನಿಕರು ಆರೋಪಿಸಿದ್ದಾರೆ.

ಈಗಾಗಲೇ ಈ ಕ್ಷೇತ್ರದಲ್ಲಿ ಬೆಳೆದಿರುವ ವಿವಿಧ ಜಾತಿಯ ಸಸಿಗಳನ್ನು ವಿತರಣೆ ಮಾಡಲು ಆದಷ್ಟು ಬೇಗ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.