*ಗೋಣಿಕೊಪ್ಪ. ಜೂ. 23: ಹಲವು ವರ್ಷಗಳಿಂದ ಸರಕಾರದ ಸವಲತ್ತುಗಳಿಂದ ವಂಚಿತರಾದ ಮಾಯಮುಡಿ ಗ್ರಾ.ಪಂ. ವ್ಯಾಪ್ತಿಯ ಚೆನ್ನಂಗೊಲ್ಲಿ ಗ್ರಾಮಸ್ಥರು ಸಚಿವರ ವಾಹನವನ್ನು ತಡೆದು ಮೂಲಭೂತ ಸೌಕರ್ಯ ಒದಗಿಸಿಕೊಡುವಂತೆ ಮತ್ತು ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿನ ಸಮಸ್ಯೆಯ ಬಗ್ಗೆ ಅವಲೋಕಿಸುವಂತೆ ಒತ್ತಾಯಿಸಿದರು. ತಿತಿಮತಿ ಗ್ರಾ.ಪಂ. ವ್ಯಾಪ್ತಿಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಗೋಣಿಕೊಪ್ಪಕ್ಕೆ ಬರುತ್ತಿದ್ದಾಗ ನೂರಕ್ಕೂ ಹೆಚ್ಚು ಗ್ರಾಮಸ್ಥರು ಸಚಿವರ ವಾಹನವನ್ನು ತಡೆದರು.

ಈ ಸಂದರ್ಭ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರಕಾರದಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವದಾಗಿ ಭರವಸೆ ನೀಡಿದರು. ನಂತರ ಶೀಘ್ರದಲ್ಲೇ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಡಲಾಗುವದು ಎಂದು ತಿಳಿಸಿದ ಅವರು, ಸ್ಥಳೀಯ ಸಂಸದರು ಹಾಗೂ ಶಾಸಕರಲ್ಲಿ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಒತ್ತಾಯಿಸಿ. ಕಳೆದ ಅಧಿಕಾರದ ಅವಧಿಯಲ್ಲಿ ಬಿ.ಜೆ.ಪಿ. ಸರಕಾರ ಇಲ್ಲಿನ ಜನರಿಗೆ ಸೌಕರ್ಯಗಳನ್ನು ಒದಗಿಸಿಕೊಡಬಹುದಾಗಿತ್ತು. ಈ ಬಗ್ಗೆ ಜನರು ಪ್ರಶ್ನಿಸಬೇಕು ಎಂದು ತಿಳಿಸಿದರು. ನಂತರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದÀರ್ಭ ಜಿ.ಪಂ. ಸದಸ್ಯೆ ಪಂಕಜ, ಮಾಜಿ ಎಂಎಲ್‍ಸಿ ಅರುಣ್ ಮಾಚಯ್ಯ, ಕದ್ದಣಿಯಂಡ ಹರೀಶ್ ಬೋಪಣ್ಣ, ಪೊನ್ನಂಪೇಟೆ ಕಾಂಗ್ರೆಸ್ ವಲಯ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಜರಿದ್ದರು.