ಶನಿವಾರಸಂತೆ: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 3ನೇ ವರ್ಷದ ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳು ಯೋಗ ದಿನವನ್ನು ಆಚರಿಸಿದರು.

ಈ ಸಂದರ್ಭ ಮುಖ್ಯ ಶಿಕ್ಷಕಿ ಪದ್ಮಾವತಿ ಮಾತನಾಡಿ, ಪ್ರಾಥಮಿಕ ಹಂತದಿಂದಲೇ ಯೋಗ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸÀನಗೊಳ್ಳುತ್ತದೆ ಎಂದರು.

ದೈಹಿಕ ಶಿಕ್ಷಣ ಶಿಕ್ಷಕ ಎಂ.ಎನ್. ಮಲ್ಲಿಕಾರ್ಜುನ್ ಮಾರ್ಗದರ್ಶನದಲ್ಲಿ 5 ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳು ಹಲವು ವಿಧದ ಯೋಗಾಸನಗಳನ್ನು ಪ್ರದರ್ಶಿಸಿದರು. ಸಹ ಶಿಕ್ಷಕಿಯರು ಪಾಲ್ಗೊಂಡಿದ್ದರು.ಕಕ್ಕಬೆ: ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸುವದರ ಮೂಲಕ ಆಚರಿಸಲಾಯಿತು.

ಮಡಿಕೇರಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ ವಿದ್ಯಾರ್ಥಿಗಳಿಗೆ ಬೆಳಗ್ಗಿನ ಉಪಾಹಾರ ನೀಡಿ ಸಹಕರಿಸಿದರು. ಮುಖ್ಯ ಶಿಕ್ಷಕಿ ಬಿ.ಎಸ್. ಕುಸುಮ, ಶಿಕ್ಷಕರಾದ ಸುಬ್ರಮಣಿ, ಸುಮಯ, ಮಾಲತಿ, ಶೋಭಾ, ರಜೀಯ ಇದ್ದರು.ಸಿದ್ದಾಪುರ: ಸಿದ್ದಾಪುರ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ಎನ್.ಸಿ.ಸಿ. ಅಧಿಕಾರಿ ರಘುವೀರ್ ನಾಯಕ್ ಹಾಗೂ ಮುಖ್ಯ ಶಿಕ್ಷಕ ಬಾಬು ನಾಯ್ಕ್ ಯೋಗದ ಮಹತ್ವ ಹಾಗೂ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ತದನಂತರ ಶಾಲಾ ಮಕ್ಕಳಿಗೆ ಯೋಗಾಸನ ಮಾಡಿಸಲಾಯಿತು. ಇದೇ ಸಂದರ್ಭ ಶಾಲಾ ಶಿಕ್ಷಕರು ಹಾಜರಿದ್ದರು.ಶನಿವಾರಸಂತೆ: ಭಾರತಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನ್ಯಾಷನಲ್ ಇನ್‍ಸ್ಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಯೋಗ ಸಂಸ್ಥೆಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಯೋಗ ಶಿಕ್ಷಕ ಕುಮಾರ್, ಸ್ಥಳೀಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಸ್.ಎಂ. ಉಮಾಶಂಕರ್, ಉದ್ಯಮಿ ಸೋಮಣ್ಣ, ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿದರು. ವೇದಿಕೆಯಲ್ಲಿ ಕರಾಟೆ ತರಬೇತುದಾರ ಅರುಣ್ ಕುಮಾರ್, ಪಳನಿ, ಪತ್ರಕರ್ತ ಮಾಲಂಬಿ ದಿನೇಶ್, ಸುರೇಶ್ ಒಡೆಯನಪುರ ಮುಂತಾದವರಿದ್ದರು. ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗ ಪ್ರದರ್ಶನ ಮಾಡಿದರು.ಕೊಡ್ಲಿಪೇಟೆ: ಕೊಡ್ಲಿಪೇಟೆ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ದೊಡ್ಡಕೊಡ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆರ್ಟ್ ಆಫ್ ಲಿವಿಂಗ್, ಶನಿವಾರಸಂತೆ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯೋಗದ ಕುರಿತು ಆರ್ಟ್ ಆಫ್ ಲಿವಿಂಗ್‍ನ ದೀಪಕ್ ಮಾಹಿತಿ ನೀಡಿದರು.

ಸೋಮವಾರಪೇಟೆ ಆರ್ಟ್ ಆಫ್ ಲಿವಿಂಗ್‍ನ ಸಂಚಾಲಕಿ ರಾಗಿಣಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ದಿನೇಶ್ ಮಾಲಂಬಿ, ಶನಿವಾರಸಂತೆ ಪತ್ರಕರ್ತ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್, ಆರ್ಟ್ ಆಫ್ ಲಿವಿಂಗ್ ಯೋಗ ಸಂಸ್ಥೆಯ ಸ್ವಯಂಸೇವಕ ಅಂಜನ್, ಸೋಮವಾರಪೇಟೆ ಆರ್ಟ್ ಆಫ್ ಲಿವಿಂಗ್ ಸಂಚಾಲಕ ವಿಜಯ್ ಹಾನಗಲ್, ಸಂಸ್ಥೆಯ ಸಂಚಾಲಕಿ ರುಬಿನ, ಎಸ್‍ಡಿಎಂಸಿ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಕಿ ಕವಿತ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಕೊಡ್ಲಿಪೇಟೆ ಕ್ಲಸ್ಟರ್ ಸಿಆರ್‍ಪಿ ಜೆ.ಡಿ. ಸುರೇಶ್, ಬೆಸೂರು ಕ್ಲಸ್ಟರ್ ಸಿಆರ್‍ಪಿ ಮಲ್ಲಿಕಾರ್ಜುನ, ದೊಡ್ಡಕೊಡ್ಲಿ ಶಾಲಾ ಶಿಕ್ಷಕ ಫಯಾಜ್, ಕೊಡ್ಲಿಪೇಟೆ ಗ್ರಾ.ಪಂ. ಸದಸ್ಯೆ ರೋಹಿಣಿ, ಮಾಜಿ ತಾ.ಪಂ. ಸದಸ್ಯೆ ಮಮತ ಸತೀಶ್ ಮುಂತಾದವರಿದ್ದರು. ಯೋಗ ಅಭ್ಯಾಸ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ವ್ಯಾಪ್ತಿಯ 6 ಶಾಲೆಗಳಿಂದ ಬಂದ ಒಟ್ಟು 200 ವಿದ್ಯಾರ್ಥಿಗಳು ಸಾಮೂಹಿಕ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಯೋಗ ಶಿಕ್ಷಕ ದೀಪಕ್ ಉಪಾಧ್ಯಾಯ ಮತ್ತು ಅಂಜನ್ ಅವರುಗಳು ಮಕ್ಕಳಿಗೆ ಯೋಗ ಮತ್ತು ಧ್ಯಾನದ ಆಯಾಮಗಳನ್ನು ಹೇಳಿಕೊಟ್ಟರು.