ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಹಾಗೂ ಸುಂಟಿಕೊಪ್ಪ ಒಕ್ಕೂಟದ ವತಿಯಿಂದ ಸರಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.

ಇಲ್ಲಿನ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸೆಲ್ವಿ, ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಸರಸ್ವತಿ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಕೊಡಗು ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಟಿ.ಜಿ. ಪ್ರೇಮ್‍ಕುಮಾರ್, ಸೇವಾ ಪ್ರತಿನಿಧಿ ಚಿತ್ರಾ ಸುರೇಶ್, ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಇದ್ದರು.ಗೋಣಿಕೊಪ್ಪಲು: ತಿತಿಮತಿ ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ವಿವೇಕಾನಂದ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ತಿತಿಮತಿ ನಗರದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಯಿತು.

ಜನಪ್ರತಿನಿಧಿಗಳು, ಶಿಕ್ಷಕರು, ಮಕ್ಕಳು ಹಾಗೂ ಸ್ಥಳೀಯ ನಾಗರಿಕರು ಒಟ್ಟುಗೂಡಿ ಪಟ್ಟಣದ ಕಸಗಳನ್ನು ತೆಗೆದು ನಗರವನ್ನು ಶುಚಿಯಾಗಿಡಿ ಎಂದು ಸಂದೇಶ ಸಾರಿದರು.

ಪೌರಕಾರ್ಮಿಕರ ಸಹಾಯದಿಂದ ಚರಂಡಿಗಳನ್ನು ಶುಚಿಗೊಳಿಸಲಾಯಿತು. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಹಾಗೂ ಕಸಗಳನ್ನು ರಸ್ತೆಗೆ ಹಾಕದಂತೆ ಮನವಿ ಮಾಡಿಕೊಂಡರು.

ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಶಿವ ಕುಮಾರ್, ಸದಸ್ಯರಾದ ರಶಿ, ಚುಬ್ರು, ಅನೂಪ್, ಮುತ್ತ, ತಾ.ಪಂ. ಸದಸ್ಯೆ ಆಶಾ ಜೇಮ್ಸ್, ಕ್ಷೇತ್ರ ಆರೋಗ್ಯ ಅಧಿಕಾರಿ ಶಿವಯ್ಯ, ಸಹಾಯಕ ಅಧಿಕಾರಿ ರಾಹುಲ್, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.ಕೂಡಿಗೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಮಾತನಾಡಿ, ಪರಿಸರದ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕೆ.ಟಿ. ಈರಯ್ಯ, ಕೆ.ಜಿ. ಮೋಹಿನಿ, ಧರ್ಮಸ್ಥಳ ಸಂಘದ ಮೇಲ್ವಿಚಾರಕಿ ರಜಿನಿ, ಶಾಲಾ ಮುಖ್ಯೋಪಾಧ್ಯಾಯಿನಿ ಪಾರ್ವತಿ, ತಾಲೂಕು ಸಹಕಾರ ಕೂಟ ಮಾಜಿ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅನುಸೂಯ, ಸದಸ್ಯರುಗಳಾದ ಕೆ.ಟಿ. ವೆಂಕಟೇಶ್ ಸೇರಿದಂತೆ ಗ್ರಾಮಾಭಿವೃದ್ಧಿ ಸಮಿತಿಯ ಸದಸ್ಯರು, ಸಹ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಇದ್ದರು.