ಮಡಿಕೇರಿ, ಜೂ.26 : ಹಿರಿಯ ನಾಗರಿಕರು ಮತ್ತು ಪತ್ರಕರ್ತರ ಆರೋಗ್ಯ ಸಂರಕ್ಷಣೆಯ ಚಿಂತನೆಯಡಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿ ಸಮಿತಿ, ಪ್ರಜಾಸತ್ಯ ಪತ್ರಿಕೆ ಮತ್ತು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ತಾ.28 ರಂದು ನಗರದ ರೋಟರಿ ಸಭಾಂಗಣದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಯಲಿದೆ.

ಪ್ರಜಾಸತ್ಯ ಪತ್ರಿಕೆಯ ಹಿರಿಯ ವರದಿಗಾರರಾದ ಬಿ.ಸಿ. ದಿನೇಶ್ ಸುದ್ದಿಗೋಷ್ಠಿಯಲ್ಲಿ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಶಿಬಿರ ನಡೆಯಲಿದ್ದು, ಇದನ್ನು ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ ನಡೆಸಿಕೊಡಲಿದೆ. ಶಿಬಿರದಲ್ಲಿ ಜನರಲ್ ಮೆಡಿಸಿನ್, ಸ್ತ್ರೀ ರೋಗ, ನೇತ್ರರೋಗ, ಎಲುಬು ಮತ್ತು ಕೀಲು, ಕಿವಿ, ಮೂಗು, ಗಂಟಲು ರೋಗ, ಮಕ್ಕಳ ರೋಗಗಳಿಗೆ ಸಂಬಂಧಿಸಿದಂತೆ ತಪಾಸಣೆ ಮತ್ತು ಚಿಕಿತ್ಸೆ ನಡೆಯಲಿದೆ ಎಂದು ತಿಳಿಸಿದರು.

ಶಿಬಿರವನ್ನು ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿ ಸಮಿತಿಯ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಪ್ರೀಂ ಕೋರ್ಟ್‍ನ ವಕೀಲ ಬ್ರಿಜೇಶ್ ಕಾಳಪ್ಪ ಮತ್ತು ಪ್ರಜಾಸತ್ಯ ದಿನ ಪತ್ರಿಕೆಯ ಸಂಪಾದಕರು ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ|ಬಿ.ಸಿ.ನವೀನ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದರು.

ಅತಿಥಿಗಳಾಗಿ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಜಿ.ಟಿ.ರಾಘವೇಂದ್ರ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಉಪನಿರ್ದೇಶಕರಾದ ಎನ್.ಎಂ. ಜಗದೀಶ್, ಕೆಎಂಸಿ ಆಸ್ಪತ್ರೆಯ ಮೂಳೆ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ| ಪÀÇರ್ಣ ಚಂದ್ರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಅತಿಥಿಗಳಾಗಿ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಜಿ.ಟಿ. ರಾಘವೇಂದ್ರ, ವಿಕಲಚೇತನರು ಮತ್ತು ಹಿರಿಯ ನಾಗಿರಕರ ಸಬಲೀಕರಣ ಇಲಾಖೆಯ ಉಪನಿರ್ದೇಶಕ ಎನ್.ಎಂ. ಜಗದೀಶ್, ಕೆಎಂಸಿ ಆಸ್ಪತ್ರೆಯ ಮೂಳೆ ಶಾಸ್ತ್ರ ವಿಭಾಗದ ಅಸೋಸಿಯೆಟ್ ಪ್ರೊಫೆಸರ್ ಡಾ| ಪೂರ್ಣಚಂದ್ರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಹಿರಿಯ ನಾಗರೀಕರ ವೇದಿಕೆಯ ಅಧ್ಯಕ್ಷರಾದ ಜಿ.ಟಿ.ರಾಘವೇಂದ್ರ ಮಾತನಾಡಿ, ವೇದಿಕೆಯಲ್ಲಿ ಜಿಲ್ಲಾ ವ್ಯಾಪ್ತಿಯ 500 ಕ್ಕೂ ಹೆಚ್ಚಿನ ಹಿರಿಯ ನಾಗರಿಕರು ಸದಸ್ಯತ್ವವನ್ನು ಹೊಂದಿಕೊಂಡಿದ್ದು, ಈ ಎಲ್ಲಾ ಹಿರಿಯ ನಾಗರಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳ ಬಹುದೆಂದರು. ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಸ್.ಎಂ. ಚಂಗಪ್ಪ ಮಾತನಾಡಿ, ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ತಮ್ಮ ಆರೋಗ್ಯ ಸಂರಕ್ಷಣೆÉಯತ್ತ ಹೆಚ್ಚಿನ ಕಾಳಜಿ ವಹಿಸುವದು ಅಗತ್ಯವೆಂದರು.