ಮಡಿಕೇರಿ. ಜೂ. 26: ಬೆಂಗಳೂರಿನ ಶಿಲ್ಪಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಕೊಡಗು ಜಿಲ್ಲೆಯಿಂದ 500 ಮಂದಿ ತೆರಳಿದ್ದಾರೆ.ತಾ. 27ರಂದು (ಇಂದು) ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮುನ್ನ ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ವಿ.ವಿ. ಪುರಂ ಬಳಿಯ ಒಕ್ಕಲಿಗರ ಸಂಘದಿಂದ ಮೆರವಣಿಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಸುಮಾರು 15 ಬಸ್‍ಗಳಲ್ಲಿ ಫೆಡರೇಷನ್ ಆಫ್ ಕೊಡಗು ಗೌಡ ಸಮಾಜ ನೇತೃತ್ವದಲ್ಲಿ ತೆರಳಿದ್ದಾರೆ.ಆದಿ ಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಜಿಲ್ಲೆಯಿಂದ 500 ಮಂದಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಅನಂತ್ ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಫೆಡರೇಷನ್ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ.