ಮಡಿಕೇರಿ, ಜೂ. 28: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಖಾಲಿ ಇರುವ ಅಡುಗೆಯವರು ಹಾಗೂ ಅಡುಗೆ ಸಹಾಯಕರ ಹುದ್ದೆಗೆ ದಾಖಲಾತಿ ಪರಿಶೀಲನೆಯಲ್ಲಿ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಗೆ ಅರ್ಹರಾದವರಿಗೆ ತಾ. 28 ಮತ್ತು 29 ರಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ದಿನಾಂಕ ಮುಂದೂಡಲಾಗಿದ್ದು, ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಯು ಅಡುಗೆಯವರ ಹುದ್ದೆಗೆ ಜುಲೈ 3 ರಂದು ಬೆಳಿಗ್ಗೆ 9 ಗಂಟೆಯಿಂದ ಹಾಗೂ ಅಡುಗೆ ಸಹಾಯಕರ ಹುದ್ದೆಗೆ ಜುಲೈ 4 ರಂದು ಬೆಳಿಗ್ಗೆ 9 ಗಂಟೆಯಿಂದ ಪ್ರಾಯೋಗಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ತಪ್ಪದೇ ಹಾಜರಾಗಲು ಸೂಚಿಸಿದೆ.

ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ: 08272-225628, ಮೊಬೈಲ್ ಸಂಖ್ಯೆ 9448505919, 9741757291, 9972531328, 7204320214 ಅನ್ನು ಸಂಪರ್ಕಿಸಬಹುದಾಗಿದೆ. ವೆಬ್‍ಸೈಟ್: ತಿತಿತಿ.ಞoಜಚಿgu.ಟಿiಛಿ.iಟಿ ಮತ್ತು ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ. ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇಲ್ಲಿಯ ಸೂಚನಾ ಫಲಕದಲ್ಲಿ ನೋಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ.